ಬೆಂಗಳೂರು: ಮುಂದಿನ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ಮೋದಿ ಅವರನ್ನು ಮಣಿಸಲು ಒಂದಾಗುತ್ತಿರುವ ಪ್ರತಿಪಕ್ಷಗಳು ಇಂದು ಮತ್ತು ನಾಳೆ ಬೆಂಗಳೂರಿನಲ್ಲಿ ಮಹತ್ವದ ಸಭೆ ನಡೆಸಲಿವೆ.
ಲೋಕಸಭೆ ಚುನಾವಣೆಯಲ್ಲಿ ಮೋದಿ ವಿರುದ್ಧ ಪ್ರಬಲ ಒಕ್ಕೂಟ ರಚಿಸಲು ಪ್ರತಿಪಕ್ಷಗಳು ಪ್ರಯತ್ನ ನಡೆಸಿವೆ. ಜೂನ್ 23 ರಂದು ಪಾಟ್ನಾದಲ್ಲಿ ವಿಪಕ್ಷಗಳ ಮೊದಲ ಸಭೆ ನಡೆದಿತ್ತು. ಎರಡನೇ ಸಭೆ ಕಾಂಗ್ರೆಸ್ ನೇತೃತ್ವದಲ್ಲಿ ಇಂದು ಮತ್ತು ನಾಳೆ ಬೆಂಗಳೂರಿನಲ್ಲಿ ನಡೆಯಲಿದೆ.
26 ಪಕ್ಷಗಳ ಮುಖಂಡರಿಗೆ ಆಹ್ವಾನ ನೀಡಲಾಗಿದೆ. ಮೈತ್ರಿಕೂಟದ ಹೆಸರು, ಅಜೆಂಡಾ ಮತ್ತು ಮೈತ್ರಿಯ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯಲಿದ್ದು, ಸಂಸತ್ ಅದಿವೇಶನದಲ್ಲಿ ಒಗ್ಗೂಡಿ ಹೋರಾಡುವ ಕುರಿತು ಸಮಾಲೋಚನೆ ನಡೆಸಲಾಗುವುದು. ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ನಿತೀಶ್ ಕುಮಾರ್, ಲಾಲೂ ಪ್ರಸಾದ್ ಯಾದವ್, ಉದ್ಧವ್ ಠಾಕ್ರೆ, ಎಂ.ಕೆ. ಸ್ಟಾಲಿನ್. ಅರವಿಂದ್ ಕೇಜ್ರಿವಾಲ್. ಶರದ್ ಪವಾರ್ ಸೇರಿದಂತೆ ಹಲವು ನಾಯಕರು ಭಾಗವಹಿಸಲಿದ್ದಾರೆ.