ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮೇಘನಾ ಫುಡ್ಸ್ ಗ್ರೂಪ್ ಗೆ ಸೇರಿದ ಹೋಟೆಲ್, ರೆಸ್ಟೋರೆಂಟ್ ಗಳ ಮೇಲೆ ದಾಳಿ ನಡೆಸಲಾಗಿದೆ.
ಬೆಂಗಳೂರಿನ ಕೋರಮಂಗಲ, ಇಂದಿರಾನಗರ, ಜಯನಗರದಲ್ಲಿರುವ ಶಾಖೆಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ.
ಮೆಘನಾ ಫುಡ್ಸ್ ಕಂಪನಿಗೆ ಸಂಬಂಧಿಸಿದ ಒಟ್ಟು 10ಕ್ಕೂ ಹೆಚ್ಚು ಸ್ಥಳಗಳಲ್ಲಿ ಐಟಿ ದಾಳಿ ನಡೆಸಲಾಗಿದೆ. ಆದಾಯ ತೆರಿಗೆ ಪಾವತಿಯಲ್ಲಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ಕರ್ನಾಟಕ ಹಾಗೂ ಗೋವಾ ವಿಭಾಗದ ಐಟಿ ಅಧಿಕಾರಿಗಳಿಂದ ದಾಳಿ ನಡೆದಿದೆ ಎಂದು ತಿಳಿದುಬಂದಿದೆ.