ಬೆಂಗಳೂರು: ಜನವರಿ 19ರಂದು ಮೆಟ್ರೋ ನೇರಳೆ ಮಾರ್ಗ ಸಂಚಾರದಲ್ಲಿ ವ್ಯತ್ಯಯವಾಗಲಿದೆ. ಕಬ್ಬನ್ ಪಾರ್ಕ್- ಎಂಜಿ ರೋಡ್ ನಡುವೆ ಹಳಿ ನಿರ್ವಹಣಾ ಕಾಮಗಾರಿ ಹಿನ್ನಲೆ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಹೇಳಲಾಗಿದೆ.
ನಿರ್ವಹಣೆ ಕಾರಣದಿಂದಾಗಿ ನೇರಳೆ ಮಾರ್ಗದ ಕೆಂಪೇಗೌಡ ಮೆಜೆಸ್ಟಿಕ್ ನಿಲ್ದಾಣ ಮತ್ತು ಇಂದಿರಾ ನಗರ ನಿಲ್ದಾಣಗಳ ನಡುವಿನ ಸೇವೆಯಲ್ಲಿ ವ್ಯತ್ಯಾಸ ಉಂಟಾಗುತ್ತದೆ. ಈ ನಿಲ್ದಾಣ ನಡುವೆ ಮೂರು ಗಂಟೆ ಮೆಟ್ರೋ ಸೇವೆ ಇರುವುದಿಲ್ಲ. ಜನವರಿ 19ರಂದು ಬೆಳಗ್ಗೆ 7 ಗಂಟೆಯಿಂದ 10 ಗಂಟೆಯವರೆಗೆ ಮೆಟ್ರೋ ಸೇವೆ ಇರುವುದಿಲ್ಲ. ಹಸಿರು ಮಾರ್ಗದಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ನಮ್ಮ ಮೆಟ್ರೋದಿಂದ ಮಾಧ್ಯಮ ಪ್ರಕಟಣೆ ನೀಡಲಾಗಿದೆ.