ಪುಣೆ: ಮುಂಬೈ -ಬೆಂಗಳೂರು ಹೆದ್ದಾರಿ ದಟ್ಟಣೆಯಿಂದ ಕೂಡಿದ್ದು, ಉಭಯ ನಗರಗಳ ನಡುವೆ ಹೊಸ 14 ಪಥದ ಎಕ್ಸ್ ಪ್ರೆಸ್ ವೇ ನಿರ್ಮಿಸಲಾಗುವುದು ಎಂದು ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.
ಪುಣೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಈಗಾಗಲೇ ಟೆಂಡರ್ ಪ್ರಕ್ರಿಯೆ ಆರಂಭಿಸಿದ್ದು, ಇನ್ನು ಆರು ತಿಂಗಳಲ್ಲಿ ಕಾಮಗಾರಿ ಶುರುವಾಗಲಿದೆ ಎಂದು ತಿಳಿಸಿದ್ದಾರೆ.
ಮುಂಬೈನ ಅಟಲ್ ಸೇತುವೆಯಿಂದ ಈ ಹೊಸ ರಸ್ತೆ ಶುರುವಾಗಲಿದೆ. ಪುಣೆ ರಿಂಗ್ ರಸ್ತೆಯ ಮೂಲಕ ಸಾಗಲಿದೆ. ಛತ್ರಪತಿ ಸಂಭಾಜಿ ನಗರವನ್ನು ಕೂಡ ಹಾದು ಹೋಗಲಿದ್ದು, ಇದು ಹಾಲಿ ರಸ್ತೆಗೆ ಬದಲಿಯಾಗಲಿದೆ ಎಂದು ಹೇಳಿದ್ದಾರೆ.
ಮುಂಬೈ -ಬೆಂಗಳೂರು 14 ಪಥದ ಎಕ್ಸ್ ಪ್ರೆಸ್ ವೇ ನಿರ್ಮಾಣದಿಂದ ಹಾಲಿ ಮುಂಬೈನ ಎಕ್ಸ್ ಪ್ರೆಸ್ ವೇನ 50ರಷ್ಟು ವಾಹನಗಳು ಹೊಸ ಹೆದ್ದಾರಿಗೆ ವರ್ಗಾವಣೆ ಆಗುತ್ತವೆ. ಮುಂದಿನ ಆರು ತಿಂಗಳಲ್ಲಿ ಕೆಲಸ ಶುರುವಾಗಲಿದೆ ಎಂದು ತಿಳಿಸಿದ್ದಾರೆ.