
ಬೆಂಗಳೂರು: ಮಚ್ಚಿನಿಂದ ಕೊಚ್ಚಿ ಇಬ್ಬರು ಹೆಣ್ಣು ಮಕ್ಕಳನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಬೆಂಗಳೂರಿನ ದಾಸರಹಳ್ಳಿಯಲ್ಲಿ ಡಬಲ್ ಮರ್ಡರ್ ನಡೆದಿದೆ.
ಮಲ ತಂದೆಯಿಂದ ಇಬ್ಬರು ಹೆಣ್ಣು ಮಕ್ಕಳನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಉತ್ತರ ಭಾರತ ಮೂಲದ ವ್ಯಕ್ತಿ ಕೃತ್ಯವೆಸಗಿದ್ದಾನೆ. ಕಾವೇರಿ ಲೇಔಟ್ ನ ಮನೆಯಲ್ಲಿ ಕುಟುಂಬದವರು ವಾಸವಾಗಿದ್ದಾರೆ.
ಸುಮಾರು 14 ವರ್ಷ ಮತ್ತು 15 ವರ್ಷದ ಇಬ್ಬರು ಹೆಣ್ಣು ಮಕ್ಕಳನ್ನು ಹತ್ಯೆ ಮಾಡಿದ ಆರೋಪಿ ಪರಾರಿಯಾಗಿದ್ದಾನೆ. ಘಟನೆ ಸ್ಥಳಕ್ಕೆ ಈಶಾನ್ಯ ವಿಭಾಗದ ಡಿಸಿಪಿ ಸಜಿತ್ ಭೇಟಿ ನೀಡಿದ್ದಾರೆ. ಅಮೃತಹಳ್ಳಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.