
ಬೆಂಗಳೂರು: ಬೆಂಗಳೂರಿನಲ್ಲಿ ತಡರಾತ್ರಿ ವ್ಯಕ್ತಿಯೊಬ್ಬನನ್ನು ಮಾರಕಾಸ್ತ್ರಗಳಿಂದ ಥಳಿಸಿ ಕಲ್ಲು ಎತ್ತಿ ಹಾಕಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ.
ತಲಘಟ್ಟಪುರ ನೆಟ್ಟಿಗೆರೆಪಾಳ್ಯ ಸಮೀಪ ಘಟನೆ ನಡೆದಿದ್ದು, ಇಂದು ಬೆಳಿಗ್ಗೆ ಮೃತನನ್ನು ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ತಲಘಟ್ಟಪುರ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಅಪರಿಚಿತ ವ್ಯಕ್ತಿಯ ಕೊಲೆ ನಡೆದ ಶಂಕೆ ವ್ಯಕ್ತವಾಗಿದ್ದು, ಮೃತನ ಗುರುತು ಪತ್ತೆಗೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ.