
ಬೆಂಗಳೂರು: ಮಾರಕಾಸ್ತ್ರಗಳಿಂದ ಥಳಿಸಿ ವ್ಯಕ್ತಿಯನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಶ್ರೀನಿವಾಸ್(28) ಕೊಲೆಯಾದ ವ್ಯಕ್ತಿ ಎನ್ನಲಾಗಿದೆ.
ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟ ನಿವಾಸಿಯಾಗಿರುವ ಶ್ರೀನಿವಾಸ್ ನನ್ನು ಲಾಂಗ್ ನಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಬೆಂಗಳೂರು ಉತ್ತರ ತಾಲೂಕಿನ ಹುಸ್ಕೂರು ಗ್ರಾಮದಲ್ಲಿ ಘಟನೆ ನಡೆದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಹಣಕಾಸಿನ ವಿಚಾರಕ್ಕೆ ಹತ್ಯೆ ನಡೆದಿದೆ ಎನ್ನಲಾಗಿದೆ. ಮಾದನಾಯಕನಹಳ್ಳಿ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು, ಆರೋಪಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.