
ಬೆಂಗಳೂರು: ಬೆಂಗಳೂರಿನಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ನಾಯಂಡಹಳ್ಳಿ ಪೆಟ್ರೋಲ್ ಬಂಕ್ ಸಮೀಪದ ಮನೆ ಒಂದರಲ್ಲಿ ನಡೆದಿದೆ.
ಹಣಕಾಸಿನ ವಿಚಾರಕ್ಕೆ 44 ವರ್ಷದ ಲಿಯಾಖತ್ ಅಲಿಖಾನ್ ಅವರನ್ನು ಕೊಲೆ ಮಾಡಲಾಗಿದೆ. ಸ್ನೇಹಿತರಾದ ವಾಸೀಂ ಮತ್ತು ಜೋಹರ್ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಪ್ರಕರಣ ದಾಖಲಿಸಿಕೊಂಡ ಚಂದ್ರಾ ಲೇಔಟ್ ಠಾಣೆ ಪೊಲೀಸರು ತನಿಖೆ ನಡೆಸಿದ್ದಾರೆ.