
ಬೆಂಗಳೂರು: ಅಳಿಯನೇ ಅತ್ತೆಯನ್ನು ಬರ್ಬರವಾಗಿ ಹತ್ಯೆ ಮಾಡಿದ ಬೆಂಗಳೂರಿನ ಕೆಂಗೇರಿ ಸಮೀಪದ ಬೃಂದಾವನ ಲೇಔಟ್ ನಲ್ಲಿ ಘಟನೆ ನಡೆದಿದೆ.
ಇಳವರಸಿ(48) ಕೊಲೆಯಾದವರು ಎಂದು ಹೇಳಲಾಗಿದೆ. ಅವರನ್ನು ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ. ಅಳಿಯ ದಿವಾಕರ ಹತ್ಯೆಗೈದಿದ್ದಾನೆ. ಘಟನೆಯಲ್ಲಿ ವಿನೋದ್ ಕುಮಾರ್ ಎಂಬುವವರಿಗೂ ಗಾಯಗಳಾಗಿವೆ. ಕೆಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.