ಬೆಂಗಳೂರು: ಬೆಂಗಳೂರು -ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ನಿರಂತರವಾಗಿ ಅಪಘಾತಗಳು ಸಂಭವಿಸುತ್ತಿರುವ ಹಿನ್ನೆಲೆಯಲ್ಲಿ ಬೈಕ್, ತ್ರಿಚಕ್ರ ವಾಹನ, ಟ್ರ್ಯಾಕ್ಟರ್ ಸಂಚಾರಕ್ಕೆ ನಿಷೇಧ ಹೇರಲು ರಾಷ್ಟ್ರೀಯ ಹೆದ್ದಾರಿ ಪ್ರಾದಿಕಾರ ನಿರ್ಧರಿಸಿದೆ.
ಬೆಂಗಳೂರು -ಮೈಸೂರು ಎಕ್ಸ್ ಪ್ರೆಸ್ ಹೆದ್ದಾರಿಯಲ್ಲಿ 600ಕ್ಕೂ ಅಧಿಕ ಅಪಘಾತಗಳು ಸಂಭವಿಸಿದ್ದು, 165ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದಾರೆ. ನಿರಂತರ ಅಪಘಾತಗಳಿಂದ ಸಾವಿನ ಹೆದ್ದಾರಿಯಾಗಿ ಮಾರ್ಪಟ್ಟಿದೆ. ಅಪಘಾತಗಳ ತಡೆಗೆ ಕ್ರಮ ಕೈಗೊಳ್ಳಲಾಗುತ್ತಿದೆ.
ನಿರಂತರ ಅಪಘಾತಗಳ ಹಿನ್ನಲೆಯಲ್ಲಿ ಬೆಂಗಳೂರು –ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ದ್ವಿಚಕ್ರ ವಾಹನ, ತ್ರಿಚಕ್ರ ವಾಹನ, ಟ್ರ್ಯಾಕ್ಟರ್ ಸೇರಿ ಕೃಷಿ ಬಳಕೆ ವಾಹನಗಳ ಸಂಚಾರಕ್ಕೆ ನಿಷೇಧ ಹೇರಲಾಗುವುದು. ಈ ಕುರಿತಾಗಿ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯಕ್ಕೆ ಹಿಂದೆಯೇ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಜುಲೈನಿಂದ ನಿಷೇಧ ಹೇರಲು ನಿರ್ಧರಿಸಲಾಗಿದೆ ಎಂದು ಹೇಳಲಾಗಿದೆ.