ರಾಮನಗರ: ಬೆಂಗಳೂರು –ಮೈಸೂರು ಎಕ್ಸ್ ಪ್ರೆಸ್ ಹೆದ್ದಾರಿಯಲ್ಲಿ ಬೈಕ್, ಆಟೋ, ಟ್ರ್ಯಾಕ್ಟರ್ ಗೆ ನಿರ್ಬಂಧ ಹೇರಿದ ಮೊದಲ ದಿನವೇ ಭಾರಿ ದಂಡ ವಸೂಲಿ ಮಾಡಲಾಗಿದೆ.
ಬೆಳಿಗ್ಗೆ 8 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ 137 ಪ್ರಕರಣ ದಾಖಲಾಗಿವೆ. ನಿಯಮ ಉಲ್ಲಂಘನೆ ಮಾಡಿದವರಿಂದ 68,500 ರೂಪಾಯಿ ದಂಡ ವಸೂಲಿ ಮಾಡಲಾಗಿದೆ. ರಾಮನಗರ ಜಿಲ್ಲಾ ಪೊಲೀಸರು 68,500 ರೂಪಾಯಿ ದಂಡ ವಸೂಲಿ ಮಾಡಿದ್ದಾರೆ.
ಬೆಂಗಳೂರು -ಮೈಸೂರು ಎಕ್ಸ್ ಪ್ರೆಸ್ ಹೆದ್ದಾರಿಯಲ್ಲಿ ಆ. 1 ರಿಂದ ಟ್ರ್ಯಾಕ್ಟರ್, ಆಟೋ, ಬೈಕ್ ಗಳಿಗೆ ನಿರ್ಬಂಧ ಹೇರಲಾಗಿದೆ.