ಬೆಂಗಳೂರು: ರಾಜ್ಯದಲ್ಲಿ ಇವತ್ತು ಒಂದೇ ದಿನ ನಾಲ್ಕು 44,631 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಇವತ್ತು 292 ಸೋಂಕಿತರು ಸಾವನ್ನಪ್ಪಿದ್ದಾರೆ.
ಒಟ್ಟು ಸೋಂಕಿತರ ಸಂಖ್ಯೆ 16,90,934 ಕ್ಕೆ ಏರಿಕೆಯಾಗಿದೆ. 24,714 ಜನ ಇಂದು ಗುಣಮುಖರಾಗಿ ಬಿಡುಗಡೆಯಾಗಿದ್ದು, ಇದುವರೆಗೆ 12,10,013 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಬರೋಬ್ಬರಿ 4,64,363 ಸಕ್ರಿಯ ಪ್ರಕರಣಗಳಿದ್ದು, ಇದುವರೆಗೆ 16,538 ಮಂದಿ ಮೃತಪಟ್ಟಿದ್ದಾರೆ.
ಬೆಂಗಳೂರಿನಲ್ಲಿ 20,870 ಜನರಿಗೆ ಸೋಂಕು ತಗಲಿದ್ದು, 132 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ. 3,01,712 ಸಕ್ರಿಯ ಪ್ರಕರಣಗಳು ಇವೆ.