ಬೆಂಗಳೂರು: ರಾಜ್ಯದ ಎರಡು ವಂದೇ ಭಾರತ್ ರೈಲುಗಳ ಸಂಚಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಹಸಿರು ನಿಶಾನೆ ತೋರಿಸಲಿದ್ದಾರೆ.
ಭಾನುವಾರ ಸುದ್ದಿಗೋಷ್ಠಿಯಲ್ಲಿ ನೈರುತ್ಯ ರೈಲ್ವೆ ಬೆಂಗಳೂರು ಹೆಚ್ಚುವರಿ ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಪರೀಕ್ಷಿತ್ ಮೋಹನ್ ಪುರಿಯಾ ಮಾಹಿತಿ ನೀಡಿ, ಮೈಸೂರು -ಚೆನ್ನೈ ಮತ್ತು ಬೆಂಗಳೂರು -ಕಲಬುರಗಿ ನಡುವೆ ಸಂಚರಿಸುವ ಎರಡು ವಂದೇ ಭಾರತ್ ರೈಲುಗಳ ಸಂಚಾರಕ್ಕೆ ಪ್ರಧಾನಿ ಮೋದಿ ವರ್ಚುಯಲ್ ಮೂಲಕ ಹಸಿರು ನಿಶಾನೆ ತೋರಿಸಲಿದ್ದಾರೆ ಎಂದು ಹೇಳಿದ್ದಾರೆ.
ಮಾರ್ಚ್ 12ರಂದು ವರ್ಚುಯಲ್ ಆಗಿ ಮೋದಿ ಅವರು ರೈಲುಗಳ ಸಂಚಾರಕ್ಕೆ ಚಾಲನೆ ನೀಡಲಿದ್ದಾರೆ. ಇದೇ ಸಂದರ್ಭದಲ್ಲಿ ನಾಗವಾರ ಬಳಿಯ ಥಣಿಸಂದ್ರದಲ್ಲಿ 270 ಕೋಟಿ ರೂಪಾಯಿ ವೆಚ್ಚದಲ್ಲಿ ವಂದೇ ಭಾರತ್ ಸ್ಲೀಪರ್ ರೈಲುಗಳ ನಿರ್ವಹಣೆ ಮತ್ತು ದುರಸ್ತಿ ಕೇಂದ್ರ ನಿರ್ಮಾಣಕ್ಕೆ ಪ್ರಧಾನಿ ವರ್ಚುಯಲ್ ಆಗಿ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.