ಬೆಂಗಳೂರು: ಬೆಂಗಳೂರಿನ ಕುಂದಲಹಳ್ಳಿ ಬಳಿಯ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣ ಮಾಸುವ ಮುನ್ನವೇ ಬೆಂಗಳೂರಿನ ಮತ್ತೊಂದು ಹೋಟೆಲ್ ಗೆ ಬಾಂಬ್ ಬೆದರಿಕೆ ಪತ್ರ ಬಂದಿದ್ದು, ಸ್ಥಳಕ್ಕೆ ದೌಡಾಯಿಸಿರುವ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.
ಬೆಂಗಳೂರಿನ ಜಾಲಹಳ್ಳಿ ವ್ಯಾಪ್ತಿಯ ಖಾಸಗಿ ಹೋಟೆಲ್ ಗೆ ಬಾಂಬ್ ಬೆದರಿಕೆ ಹಾಕಲಾಗಿದೆ. ಹೋಟೆಲ್ ಸುತ್ತ ಬಾಂಬ್ ಇರಿಸಲಾಗಿದೆ ಎಂದು ಪೋಸ್ಟ್ ಮೂಲಕ ಬೆದರಿಕೆ ಪತ್ರ ರವಾನಿಸಲಾಗಿದೆ. ವಿಷಯ ತಿಳಿಯುತ್ತಿದ್ದಂತೆ ಜಾಲಹಳ್ಳಿ ಠಾಣೆ ಪೊಲೀಸರು ಸ್ಥಳಕ್ಕೆ ತೆರಳಿದ್ದು, ಹೋಟೆಲ್ ನಲ್ಲಿದ್ದ ಗ್ರಾಹಕರು, ಸಿಬ್ಬಂದಿಗಳನ್ನು ಹೊರಕಳುಹಿಸಿ ಪರಿಶೀಲನೆ ನಡೆಸಿದ್ದಾರೆ.