ಬೆಂಗಳೂರಿನ ಕಾಟನ್ ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದ್ದ ಲಾಡ್ಜ್ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ.
ದಾಳಿಯ ವೇಳೆ 7 ಯುವತಿಯರನ್ನು ರಕ್ಷಿಸಿ ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ 6 ಮಂದಿಯನ್ನು ಬಂಧಿಸಲಾಗಿದೆ. ಮನೋಜ್ ಎಂಬಾತ ಲಾಡ್ಜ್ ನಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿರುವ ಬಗ್ಗೆ ಮಾಹಿತಿ ಪಡೆದ ಪೊಲೀಸರು, ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ದಾಳಿ ನಡೆಸಿದ್ದಾರೆ.
ಆರೋಪಿಗಳು ಕೆಲಸ ಕೊಡಿಸುವ ನೆಪದಲ್ಲಿ ಹೊರ ರಾಜ್ಯದಿಂದ ಯುವತಿಯರನ್ನು ಕರೆದುಕೊಂಡು ಬಂದು ವೇಶ್ಯಾವಾಟಿಕೆಗೆ ನೂಕಿದ್ದರು. ಹೆಚ್ಚು ಹಣ ಗಳಿಸುವ ಆಸೆ ತೋರಿಸಿ ವೇಶ್ಯಾವಾಟಿಕೆ ನಡೆಸುತ್ತಿದ್ದರು. ಯುವತಿಯರ ಫೋಟೋ ಕಳುಹಿಸಿ ಗಿರಾಕಿಗಳನ್ನು ಸೆಳೆಯುತ್ತಿದ್ದರು ಎಂದು ಹೇಳಲಾಗಿದೆ. ಕಾಟನ್ ಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮಕೈಗೊಂಡಿದ್ದಾರೆ ಎನ್ನಲಾಗಿದೆ.