alex Certify ಹೊರ ರಾಜ್ಯದ ಯುವತಿಯರ ಕರೆತಂದು ಬಾಡಿಗೆ ಮನೆಯಲ್ಲಿ ವೇಶ್ಯಾವಾಟಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹೊರ ರಾಜ್ಯದ ಯುವತಿಯರ ಕರೆತಂದು ಬಾಡಿಗೆ ಮನೆಯಲ್ಲಿ ವೇಶ್ಯಾವಾಟಿಕೆ

ಬೆಂಗಳೂರು: ಹೊರ ರಾಜ್ಯ ಹಾಗೂ ಬಾಂಗ್ಲಾದೇಶದಿಂದ ಯುವತಿಯರನ್ನು ಕರೆತಂದು ವೇಶ್ಯಾವಾಟಿಕೆ ನಡೆಸುತ್ತಿದ್ದ ಮೂವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಜಿಲ್ಲೆಯ ನೌಶಾದ್(55), ಪರಗಣ ಜಿಲ್ಲೆ ಸ್ವರೂಪ್ ನಗರದ ರಿಯಾಜುಲ್ ಶೇಖ್(31), ಬಾರಾಶಾದ್ ಜಿಲ್ಲೆ ಸಮೀರ್(40) ಬಂಧಿತ ಆರೋಪಿಗಳು. ಬಂಧಿತರಿಂದ 11 ನಕಲಿ ಆಧಾರ್ ಕಾರ್ಡ್ ಮತ್ತು ಗುರುತಿನ ಚೀಟಿ ವಶಕ್ಕೆ ಪಡೆಯಲಾಗಿದೆ. ಇಬ್ಬರು ಬಾಂಗ್ಲಾದೇಶದ ಮಹಿಳೆಯರನ್ನು ರಕ್ಷಿಸಿ ರಾಜ್ಯ ಮಹಿಳಾ ನಿಲಯಕ್ಕೆ ಒಪ್ಪಿಸಲಾಗಿದೆ.

ಬಾಂಗ್ಲಾದೇಶ ಮತ್ತು ಪಶ್ಚಿಮ ಬಂಗಾಳದಿಂದ ಯುವತಿಯರನ್ನು ಕಳ್ಳಸಾಗಾಣಿಕೆ ಮೂಲಕ ಕರೆತಂದು ಮಹಾದೇವಪುರದ ಬಾಡಿಗೆ ಮನೆಯಲ್ಲಿ ವೇಶ್ಯಾವಾಟಿಕೆ ನಡೆಸಿ ಅಕ್ರಮವಾಗಿ ಹಣ ಸಂಪಾದಿಸುತ್ತಿದ್ದರು. ಅಲ್ಲದೆ ನಕಲಿ ವಿಳಾಸ ನೀಡಿ ಆಧಾರ್ ಕಾರ್ಡ್ ಇತರೆ ದಾಖಲೆ ಸೃಷ್ಟಿಸಿಕೊಂಡಿದ್ದರು. ಇವರು ವೇಶ್ಯಾವಾಟಿಕೆ ನಡೆಸುತ್ತಿರುವ ಬಗ್ಗೆ ಮಾಹಿತಿ ಕಲೆ ಹಾಕಿದ ಪೊಲೀಸರು ದಿಢೀರ್ ದಾಳಿ ಮಾಡಿ ಬಂಧಿಸಿದ್ದಾರೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...