ಬೆಂಗಳೂರಿನಲ್ಲಿ ಮತ್ತೊಂದು ಮಾನವ ಕಳ್ಳ ಸಾಗಾಣಿಕೆ ಜಾಲ ಪತ್ತೆಯಾಗಿದೆ. ಕೆಲಸ ಕೊಡಿಸುವುದಾಗಿ ಕರೆತಂದು ವೇಶ್ಯಾವಾಟಿಕೆ ನಡೆಸುತ್ತಿದ್ದ ಆರೋಪ ಕೇಳಿಬಂದಿದೆ.
ಬಂಗಾಳ ಮೂಲದ ಮಹಿಳೆಯರನ್ನು ಕರೆತಂದು ವೇಶ್ಯಾವಾಟಿಕೆ ನಡೆಸಲಾಗುತ್ತಿತ್ತು. ಪಶ್ಚಿಮ ಬಂಗಾಳ, ಬಾಂಗ್ಲಾ ಮಹಿಳೆಯರನ್ನು ಬೆಂಗಳೂರಿಗೆ ಕರೆತಂದು ವೇಶ್ಯಾವಾಟಿಕೆಗೆ ನೂಕಲಾಗಿತ್ತು. ಈ ಬಗ್ಗೆ ಮಾಹಿತಿ ಪಡೆದ ಪೊಲೀಸರು ದಿಢೀರ್ ಕಾರ್ಯಾಚರಣೆ ನಡೆಸಿದ್ದಾರೆ.
ಬೆಂಗಳೂರಿನ ಭದ್ರಪ್ಪ ಲೇಔಟ್ ಲಾಡ್ಜ್ ಮೇಲೆ ದಾಳಿ ನಡೆಸಿ ಇಬ್ಬರನ್ನು ರಕ್ಷಣೆ ಮಾಡಲಾಗಿದೆ. ಎನ್.ಜಿ.ಒ. ಸಹಾಯದಿಂದ ಮಹಿಳೆ ಮತ್ತು ಅಪ್ರಾಪ್ತೆಯನ್ನು ರಕ್ಷಣೆ ಮಾಡಲಾಗಿದೆ. ಬೆಂಗಳೂರಿನ ಕೊಡಿಗೆಹಳ್ಳಿ ಠಾಣೆ ಪೊಲೀಸರು ಇಬ್ಬರನ್ನು ಕರೆದುಕೊಂಡು ಬಂದಿದ್ದ ಮುಂಬೈ ಮೂಲದ ಜ್ಯೋತಿಯನ್ನು ಬಂಧಿಸಿ ತನಿಖೆ ನಡೆಸಿದ್ದಾರೆ ಎನ್ನಲಾಗಿದೆ.