ಬೆಂಗಳೂರು: ಮರಾಠ ಅಭಿವೃದ್ಧಿ ನಿಗಮ ರದ್ದು ಮಾಡಬೇಕೆಂದು ಒತ್ತಾಯಿಸಿ ಕನ್ನಡ ಪರ ಸಂಘಟನೆಗಳು ಕರ್ನಾಟಕ ಬಂದ್ ಗೆ ಕರೆ ನೀಡಿದ್ದವು. ಇದಾದ ನಂತರ ಕೃಷಿ ಕಾಯ್ದೆ ರದ್ದು ಮಾಡಬೇಕೆಂದು ಒತ್ತಾಯಿಸಿ ರೈತರು ಭಾರತ ಬಂದ್ ಗೆ ಕರೆ ನೀಡಿದ್ದರು.
ನಿನ್ನೆ ಬಾರುಕೋಲು ಚಳವಳಿ ನಡೆಸಿದ್ದ ರೈತರು ಇಂದು ಕೂಡ ಬೆಂಗಳೂರಲ್ಲಿ ಪ್ರತಿಭಟನೆ ಕೈಗೊಂಡಿದ್ದಾರೆ. ಬೆಂಗಳೂರಲ್ಲಿ ಇಂದು ಕೂಡ ಸಾಲು ಸಾಲು ಪ್ರತಿಭಟನೆ ನಡೆಯಲಿವೆ.
ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ನೌಕರರು ಇಂದು ರಸ್ತೆಗಿಳಿದು ಹೋರಾಟ ಕೈಗೊಂಡಿದ್ದಾರೆ ಸಾರಿಗೆ ನೌಕರರನ್ನು ಸರ್ಕಾರಿ ನೌಕರರೆಂದು ಪರಿಗಣಿಸಲು ಆಗ್ರಹಿಸಿ ಇಂದು ಬೃಹತ್ ಕಾಲ್ನಡಿಗೆ ಜಾಥಾ ಹಮ್ಮಿಕೊಳ್ಳಲಾಗಿದೆ. ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಿಂದ ವಿಧಾನಸೌಧದವರೆಗೆ ಜಾಥಾ ನಡೆಸಲಿರುವ ಸಾರಿಗೆ ನೌಕರರು ಸರ್ಕಾರಕ್ಕೆ ಮನವಿ ಸಲ್ಲಿಸಲಿದ್ದಾರೆ.
ರೈತ ಮುಖಂಡರು ಇಂದು ರೈಲ್ವೆ ನಿಲ್ದಾಣದಿಂದ ವಿಧಾನಸೌಧದವರೆಗೆ ಪಾದಯಾತ್ರೆ ಕೈಗೊಂಡಿದ್ದಾರೆ. ಅದೇ ರೀತಿ ಐಕ್ಯ ಹೋರಾಟ ಸಮಿತಿಯಿಂದ ರಾಜಭವನಕ್ಕೆ ಮುತ್ತಿಗೆ ಹಾಕಲು ತೀರ್ಮಾನಿಸಲಾಗಿದೆ. ಹೀಗೆ ಬೆಂಗಳೂರಲ್ಲಿ ಇಂದು ಕೂಡ ಹೋರಾಟ ಮುಂದುವರೆಯಲಿದೆ.