ಬೆಂಗಳೂರು : ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆ ಪಿಎಸ್ಐ ಜಗದೀಶ್ ಕೊಲೆ ಪ್ರಕರಣದಲ್ಲಿ ಇಬ್ಬರು ಆರೋಪಿಗಳಿಗೆ ಜಿಲ್ಲಾ ಕೋರ್ಟ್ ಶಿಕ್ಷೆ ಪ್ರಕಟಿಸಿದೆ.
2016 ರಲ್ಲಿ ನೆಲಮಂಗಲದಲ್ಲಿ ನಡೆದಿದ್ದ ಪಿಎಸ್ಐ ಜಗದೀಶ್ ಕೊಲೆ ಪ್ರಕರಣ ಭಾರಿ ಸುದ್ದಿಯಾಗಿತ್ತು, ಇದೀಗ ಪ್ರಕರಣದ ಪ್ರಮುಖ ಆರೋಪಿ ಹರೀಶ್ ಬಾಬು ಎಂಬಾತನಿಗೆ ಜೀವಾವಧಿ ಶಿಕ್ಷೆ ಹಾಗೂ 3 ಲಕ್ಷ ದಂಡ ವಿಧಿಸಲಾಗಿದೆ. ಇನ್ನೋರ್ವ ಆರೋಪಿ ಮಧುಗೆ 7 ವರ್ಷ ಶಿಕ್ಷೆ ಹಾಗೂ 1 ಲಕ್ಷ ರೂ ದಂಡ ವಿಧಿಸಲಾಗಿದೆ.
ನೆಲಮಂಗಲದಲ್ಲಿ ಬೈಕ್ ಕಳ್ಳರನ್ನು ಹಿಡಿಯಲು ಬಂದಾಗ ಆಯತಪ್ಪಿ ಚರಂಡಿಗೆ ಬಿದ್ದ ಜಗದೀಶ್ ಗೆ ಚೂರಿಯಿಂದ ಬರ್ಬರವಾಗಿ ಇರಿದು ಕೊಲೆಗೈಯಲಾಗಿತ್ತು. ಡಿವೈಎಸ್ಪಿ ರಾಜೇಂದ್ರ ಕುಮಾರ್ ನೇತೃತ್ವದಲ್ಲಿ ತನಿಖೆ ನಡೆದಿತ್ತು.