ಬೆಂಗಳೂರಿನ ಹಲವು ಕಡೆಗಳಲ್ಲಿ ಪಬ್ ಮತ್ತು ರೆಸ್ಟೋರೆಂಟ್ ಗಳ ಮೇಲೆ ದಾಳಿ ನಡೆಸಲಾಗಿದೆ. ಬೆಂಗಳೂರಿನ ಕೇಂದ್ರ ವಿಭಾಗದ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ.
ಪಬ್ ಗಳಲ್ಲಿ ಅತಿಯಾದ ಡಿಜೆ ಸೌಂಡ್ ಹಾಕಿ ಮೋಜು ಮಸ್ತಿ ಮಾಡುತ್ತಿದ್ದ ಹಿನ್ನೆಲೆಯಲ್ಲಿ, ಅಪ್ರಾಪ್ತರಿಗೆ ಪ್ರವೇಶ ಮತ್ತು ಮದ್ಯ ಸೇವನೆಗೆ ಅವಕಾಶ ನೀಡಿದ ಹಿನ್ನೆಲೆಯಲ್ಲಿ ಪೊಲೀಸರು ದಾಳಿ ನಡೆಸಿದ್ದಾರೆ. ಕೇಂದ್ರ ವಿಭಾಗದ ಡಿಸಿಪಿ ಶ್ರೀನಿವಾಸ ಗೌಡ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.
ದಾಳಿಯ ವೇಳೆ ನಿಯಮ ಉಲ್ಲಂಘನೆ ಮಾಡಿರುವುದು ಬಹಿರಂಗವಾಗಿದೆ. ಹೀಗೆ ನಿಗಮ ಉಲ್ಲಂಘಿಸಿದ ಹಲವು ಪಬ್ ಗಳ ಮೇಲೆ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.