alex Certify BIG NEWS: ಹಿಂದೂ ಸಂಘಟನೆಗಳ ವಿರೋಧ ಹಿನ್ನಲೆ, ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಲ್ಲಿದ್ದ ಮಸೀದಿ ತೆರವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಹಿಂದೂ ಸಂಘಟನೆಗಳ ವಿರೋಧ ಹಿನ್ನಲೆ, ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಲ್ಲಿದ್ದ ಮಸೀದಿ ತೆರವು

ಬೆಂಗಳೂರು: ಬೆಂಗಳೂರಿನ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದ ಪ್ಲಾಟ್ಫಾರಂ 5 ರಲ್ಲಿ ನಿರ್ಮಿಸಲಾಗಿದ್ದ ಪ್ರಾರ್ಥನಾ ಮಂದಿರ ತೆರವುಗೊಳಿಸಲಾಗಿದೆ.

ವಿಶ್ರಾಂತಿ ಕೊಠಡಿಯನ್ನು ಮಸೀದಿಯಾಗಿ ಪರಿವರ್ತಿಸಿ ಪ್ರಾರ್ಥನೆ ಮಾಡಲಾಗುತ್ತಿತ್ತು. ಮಸೀದಿ ತೆರವುಗೊಳಿಸಿ ನೌಕರರ ವಿಶ್ರಾಂತಿ ಗೃಹಕ್ಕೆ ಮೀಸಲಿಡಲಾಗಿದೆ. ಹಿಂದೂ ಪರ ಸಂಘಟನೆಗಳಿಂದ ದೂರು ಹಿನ್ನೆಲೆಯಲ್ಲಿ ಮಸೀದಿ ತೆರವುಗೊಳಿಸಲಾಗಿದೆ. ವಿಶ್ರಾಂತಿ ಗೃಹದಲ್ಲಿ ಇದ್ದ ಉರ್ದು ಭಾಷೆಯ ನಾಮಫಲಕವನ್ನು ತೆರವು ಮಾಡಲಾಗಿದೆ.

ರೈಲು ನಿಲ್ದಾಣದಲ್ಲಿ ಮಸೀದಿ ನಿರ್ಮಿಸಿ ಪ್ರಾರ್ಥನೆಗೆ ಅವಕಾಶ ಮಾಡಿಕೊಟ್ಟಿದ್ದಕ್ಕೆ ಆಕ್ಷೇಪ ವ್ಯಕ್ತವಾಗಿದ್ದ ಹಿನ್ನಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...