ಬೆಂಗಳೂರು: ಇನ್ನೂ ಒಂದು ವಾರ ಬೆಂಗಳೂರು ಸೇರಿ ರಾಜ್ಯಾದ್ಯಂತ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಒಂದು ವಾರ ಕರಾವಳಿ, ಒಳನಾಡಿನಲ್ಲಿ ಹೆಚ್ಚಿನ ಮಳೆಯಾಗಲಿದ್ದು, ಬೀದರ್, ಕಲಬುರಗಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಬೆಳಗಾವಿ, ಕೊಪ್ಪಳ ಜಿಲ್ಲೆಗಳಲ್ಲೂ ಹೆಚ್ಚಿನ ಮಳೆಯಾಗುವ ಸಂಭವ ಇದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ ಭಾಗದಲ್ಲಿ ಮಳೆಯಾಗುವ ಸಂಭವ ಇದೆ. ಉತ್ತರ ಒಳನಾಡಿನಲ್ಲಿ ಹವಾಮಾನ ಇಲಾಖೆಯಿಂದ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಬೀದರ್, ಕೊಪ್ಪಳ, ಕಲಬುರಗಿ, ರಾಯಚೂರು ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗುವ ಸಂಭವವಿದೆ. ದಕ್ಷಿಣ ಒಳನಾಡಿನಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ 24 ಗಂಟೆ ಕಾಲ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ರಾಜ್ಯಾದ್ಯಂತ ಮಳೆ ಮುಂದುವರೆಯಲಿದೆ