ಬೆಂಗಳೂರು: ಫೆಂಗಲ್ ಚಂಡಮಾರುತದ ಎಫೆಕ್ಟ್ ಬೆಂಗಳೂರಿನಲ್ಲಿಯೂ ಅವಾಂತರಗಲನ್ನು ಸೃಷ್ಟಿಸುತ್ತಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಿನ್ನೆಯಿಂದ ನಿರಂತರವಾಗಿ ಮಳೆಯಾಗುತ್ತಿದ್ದು, ಮಳೆಯಿಂದಾಗಿ ಮನೆಯೊಂದು ಕುಸಿದು ಬಿದ್ದಿದೆ.
ಬೆಂಗಳೂರಿನ ಚಾಮರಾಜಪೇಟೆಯಲ್ಲಿಇನ ಜೆ.ಜೆ.ನಗರದಲ್ಲಿ ಮನೆ ಸಂಪೂರ್ಣ ಕುಸಿದು ಬಿದ್ದಿದೆ. ಮನೆಯಲ್ಲಿದ್ದ ವೃದ್ಧ ದಂಪತಿಯನ್ನು ಪೊಲಿಸರು ಹಾಗೂ ಸ್ಥಳೀಯರು ರಕ್ಷಣೆ ಮಾಡಿದ್ದಾರೆ. ಸದ್ಯ ದಂಪತಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಹಳೆಯ ಮನೆ ಇದಾಗಿದ್ದು, ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಮನೆ ಕುಸಿದು ಬಿದ್ದಿದೆ. ಬೆಂಗಳೂರಿನಾದ್ಯಂತ ಮಳೆಯಾಗುತ್ತಿದ್ದು, ಶೀತಗಾಳಿಗೆ ಜನರು ತತ್ತರಿಸುವಂತಾಗಿದೆ. ಇನ್ನೂ ಎರಡು ದಿನಗಳ ಕಾಲ ಇದೇ ರೀತಿಯ ವಾತಾವರಣ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.