ಬೆಂಗಳೂರು:ರಾಜಧಾನಿ ಬೆಂಗಳೂರಿನ ಹಲವು ಕಡೆ ತಡರಾತ್ರಿಯಿಂದ ಬೆಳಗಿನಜಾವದವರೆಗೆ ಧಾರಾಕಾರ ಮಳೆಯಾಗಿದ್ದು, ರಸ್ತೆಗಳು ಜಲಾವೃತಗೊಂಡಿವೆ.
ಮೆಜೆಸ್ಟಿಕ್, ರಾಜಾಜಿನಗರ, ಮಲ್ಲೇಶ್ವರಂ, ಯಶವಂತಪುರ, ಶಾಂತಿನಗರ, ಕೋರಮಂಗಲ, ವಿಧಾನಸೌಧ, ಶಿವಾಜಿನಗರ, ಕಾರ್ಪೊರೇಷನ್ ಸರ್ಕಲ್, ಕೆ.ಆರ್. ಮಾರುಕಟ್ಟೆ, ತ್ಯಾಗರಾಜನಗರ, ಜಯನಗರ, ಹನುಮಂತನಗರ, ಶ್ರೀನಗರ ಭಾಗಗಳಲ್ಲಿ ಮಳೆಯಾಗಿದೆ.
ಮೈಸೂರು ರಸ್ತೆ, ನಾಯಂಡಹಳ್ಳಿ, ಮಾಗಡಿ ರಸ್ತೆ, ವಿಜಯನಗರ, ಕೆಂಗೇರಿ, ಶಿವಾನಂದ ಸರ್ಕಲ್, ಮೇಖ್ರಿ ಸರ್ಕಲ್, ಹೆಬ್ಬಾಳ, ಯಲಹಂಕ, ಕೆಆರ್ ಪುರಂ ಸೇರಿದಂತೆ ಸುತ್ತಮುತ್ತ ಭಾರಿ ಮಳೆಯಾಗಿದ್ದು, ರಸ್ತೆಗಳು ಜಲಾವೃತಗೊಂಡಿವೆ. ಹಲವೆಡೆ ವಾಹನ ಸವಾರರಿಗೆ ತೊಂದರೆಯಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ಓಕಳಿಪುರಂ ಅಂಡರ್ ಪಾಸ್ ನಲ್ಲಿ ನೀರು ನಿಂತು ವಾಹನ ಸವಾರರಿಗೆ ತೊಂದರೆಯಾಗಿದೆ. ಕೆ ಆರ್ ಮಾರುಕಟ್ಟೆ ಕೆಸರು ಗದ್ದೆಯಂತಾಗಿದೆ. ಮಾರುಕಟ್ಟೆಯಲ್ಲಿ ವ್ಯಾಪಾರಿಗಳು ಪರದಾಟ ನಡೆಸಿದ್ದಾರೆ. ಮಧ್ಯರಾತ್ರಿಯಿಂದ ಮುಂಜಾನೆಯವರೆಗೂ ಧಾರಕಾರ ಮಳೆಯಾಗಿ ರಾಜಧಾನಿಯ ಹಲವು ರಸ್ತೆಗಳು ಸಂಪೂರ್ಣ ಜಲಾವೃತಗೊಂಡಿವೆ. ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ನಿವಾಸಿಗಳು ಪರದಾಟ ನಡೆಸಿದ್ದಾರೆ.