
ಬೆಂಗಳೂರು: ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆ ಪ್ರಮಾಣ ಹೆಚ್ಚಾಗಿದೆ. ನಿನ್ನೆ ಬೆಂಗಳೂರಿನಲ್ಲಿ ಧಾರಾಕಾರ ಮಳೆಯಾಗಿದೆ.
ಹವಾಮಾನ ಇಲಾಖೆ ಇಂದು ಆರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ. ದಕ್ಷಿಣ ಒಳನಾಡಿನ ಹಾಸನ, ಚಾಮರಾಜನಗರ, ಕೊಡಗು, ರಾಮನಗರ, ಬೆಂಗಳೂರು ಗ್ರಾಮಾಂತರ ಮತ್ತು ಬೆಂಗಳೂರು ನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ನಿರಂತರ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಮಳೆ ಪ್ರಮಾಣ ತಗ್ಗಿದೆ. ಧಾರವಾಡ, ಗದಗ, ಕೊಪ್ಪಳ, ಹಾವೇರಿ ಭಾಗದಲ್ಲಿ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.