ಬೆಂಗಳೂರು : ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮೂವರು ಶಂಕಿತರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.
ಕೆಫೆಯಲ್ಲಿ ಬಾಂಬ್ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಗುಪ್ತಚರ ಇಲಾಖೆ ಅಧಿಕಾರಿಗಳು ನಾಲ್ವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.
ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಶುಕ್ರವಾರ ಸಂಭವಿಸಿದ ಕಡಿಮೆ ತೀವ್ರತೆಯ ಬಾಂಬ್ ಸ್ಫೋಟದಲ್ಲಿ 10 ಜನರು ಗಾಯಗೊಂಡಿದ್ದು, ಟೈಮರ್ ಬಳಸಿ ಸುಧಾರಿತ ಸ್ಫೋಟಕ ಸಾಧನವನ್ನು (ಐಇಡಿ) ಪ್ರಚೋದಿಸುವ ಮೂಲಕ ನಡೆಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.