alex Certify ಬೆಂಗಳೂರಿನಲ್ಲಿ ಬೆಚ್ಚಿ ಬೀಳಿಸುವ ಘಟನೆ: ತಾಯಿಯ ಪ್ರಿಯಕರನಿಂದಲೇ ಮಗುವಿನ ಮೇಲೆ ಅತ್ಯಾಚಾರ, ಕೊಲೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಂಗಳೂರಿನಲ್ಲಿ ಬೆಚ್ಚಿ ಬೀಳಿಸುವ ಘಟನೆ: ತಾಯಿಯ ಪ್ರಿಯಕರನಿಂದಲೇ ಮಗುವಿನ ಮೇಲೆ ಅತ್ಯಾಚಾರ, ಕೊಲೆ

ಬೆಂಗಳೂರು: ಬೆಂಗಳೂರಿನ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮೂರುವರೆ ವರ್ಷದ ಮಗುವಿನ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ ಘಟನೆ ನಡೆದಿದೆ.

ಕಾಮಾಕ್ಷಿಪಾಳ್ಯದ ಕಾವೇರಿ ನಗರದಲ್ಲಿ ಸೋಮವಾರ ಸಂಜೆ ಘಟನೆ ನಡೆದಿದ್ದು, ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು 26 ವರ್ಷದ ಆರೋಪಿಯನ್ನು ಬಂಧಿಸಿದ್ದಾರೆ. ಬಾಗಲಕೋಟೆ ಮೂಲದ ಮಹಿಳೆ ಕೌಟುಂಬಿಕ ಕಲಹದಿಂದ ಗಂಡನಿಂದ ದೂರವಾಗಿದ್ದು, ಮಗುವಿನೊಂದಿಗೆ ಬೆಂಗಳೂರಿನಲ್ಲಿ ನೆಲೆಸಿದ್ದಾರೆ. ಗಾರ್ಮೆಂಟ್ಸ್ ಕೆಲಸಕ್ಕೆ ಹೋಗುತ್ತಿದ್ದ ಮಹಿಳೆಗೆ ಆರೋಪಿ ಪರಿಚಯವಾಗಿ ಇಬ್ಬರ ನಡುವೆ ಅಕ್ರಮ ಸಂಬಂಧ ಬೆಳೆದಿತ್ತು. ಮಹಿಳೆಯ ಮನೆಯಲ್ಲಿಯೇ ಆರೋಪಿ ನೆಲೆಸಿದ್ದು, ಮದ್ಯವ್ಯಸನಿಯಾಗಿದ್ದ.

ಸೋಮವಾರ ಸಂಜೆ ಮಗುವಿನ ಮೇಲೆ ಅತ್ಯಾಚಾರ ಎಸಗಿ ಹಲ್ಲೆ ನಡೆಸಿ ಕೊಲೆ ಮಾಡಿದ್ದಾನೆ. ಸಂಜೆ ಗಾರ್ಮೆಂಟ್ ಕೆಲಸ ಮುಗಿಸಿ ಮನೆಗೆ ಬಂದ ಮಹಿಳೆಗೆ ಮಗು ಪ್ರಜ್ಞಾಹಿನ ಸ್ಥಿತಿಯಲ್ಲಿರುವುದು ಗೊತ್ತಾಗಿದೆ. ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಪರೀಕ್ಷೆ ನಡೆಸಿದ ವೈದ್ಯರು ಮೃತಪಟ್ಟಿರುವುದಾಗಿ ದೃಢಪಡಿಸಿದ್ದಾರೆ.

ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ಮನೆ ಬಳಿ ಬಂದು ವಿಚಾರಣೆ ನಡೆಸಿದಾಗ ಮಗುವಿನ ಮುಖದ ಮೇಲೆ ಗಾಯಗಳು ಕಂಡು ಬಂದಿದೆ. ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಅತ್ಯಾಚಾರ ಎಸಗಿ ಕೊಲೆ ಮಾಡಿರುವುದಾಗಿ ತಪ್ಪೊಪ್ಪಿಕೊಂಡಿದ್ದಾನೆ. ಕೊಲೆ, ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದು ಆರೋಪಿಯನ್ನು ಬಂಧಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...