
ಬೆಂಗಳೂರು: ಬೆಂಗಳೂರಿನಲ್ಲಿ ನಾಲ್ಕು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪ ಕೇಳಿ ಬಂದಿದೆ. ವರ್ತೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನೇಪಾಳ ಮೂಲದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪ ಕೇಳಿ ಬಂದಿದೆ.
ಬಾಲಕಿಯ ತಂದೆ ಸೆಕ್ಯೂರಿಟಿ ಗಾರ್ಡ್ ಕೆಲಸ ಮಾಡುತ್ತಿದ್ದಾರೆ. ಕೃತ್ಯ ಎಸಗಿದ ಆರೋಪದ ಮೇಲೆ ಬಿಹಾರ ಮೂಲದ ಯುವಕನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಆರೋಪಿಯನ್ನು ತಮ್ಮ ವಶಕ್ಕೆ ನೀಡುವಂತೆ ನೇಪಾಳಿಗರು ಪ್ರತಿಭಟನೆ ನಡೆಸಿದ್ದಾರೆ.