ಬೆಂಗಳೂರು: ಮಾತನಾಡಬೇಕೆಂದು ಕರೆದು ಸುದ್ದಿವಾಹಿನಿಯೊಂದರ ವರದಿಗಾರರೊಬ್ಬರ ಮೇಲೆ ದುಷ್ಕರ್ಮಿಯೊಬ್ಬ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಹೆಚ್.ಎಸ್.ಆರ್ ಲೇಔಟ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ರವಿ (34) ಹಲ್ಲೆಗಳಾದವರು. ಗಂಭೀರವಾಗಿ ಹಲ್ಲೆಗೊಳಗಾಗಿರುವ ರವಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ರವಿ ನೀಡಿರುವ ದೂರಿನ ಹಿನ್ನೆಲೆಯಲ್ಲಿ ಮಂಜುನಾಥ್ ಎಂಬುವವರ ವಿರುದ್ಧ ಪ್ರಕರಣ ದಾಖಲಾಗಿದೆ.
ಆರೋಪಿ ಪತ್ತೆಗೆ ಪೊಲೀಸರು ಹುಡುಕಾಟ ನಡೆಸಿದ್ದಾರೆ. ಮಂಜುನಾಥ್ ಎಂಬಾತ ರವಿ ಎಂಬುವವರನ್ನು ಕರೆ ಮಾಡಿ ಯಾವುದೋ ವಿಚಾರ ಮತನಾಡಬೇಕು ಎಂದು ಹೇಳಿ ಕರೆಸಿಕೊಂಡಿದ್ದ. ಈ ವೇಳೆ ಹಲ್ಲೆ ನಡೆಸಲಾಗಿದೆ ಎಂದು ತಿಳಿದುಬಂದಿದೆ.