alex Certify Rain alert Bengaluru : ಬೆಂಗಳೂರಿಗರೇ ಎಚ್ಚರ : ಇಂದು ಸಂಜೆ ಭಾರಿ ಗಾಳಿ-ಮಳೆ ಮುನ್ಸೂಚನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Rain alert Bengaluru : ಬೆಂಗಳೂರಿಗರೇ ಎಚ್ಚರ : ಇಂದು ಸಂಜೆ ಭಾರಿ ಗಾಳಿ-ಮಳೆ ಮುನ್ಸೂಚನೆ

ಬೆಂಗಳೂರು : ಬೆಂಗಳೂರಲ್ಲಿ ಇಂದು ಮೋಡ ಕವಿದ ವಾತಾವರಣವಿದ್ದು, ಸಂಜೆ ಗಾಳಿ ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇಂದು ಸಂಜೆ ಮೇಲೆ ರಾತ್ರಿವರೆಗೂ ಹೆಚ್ಚು ಮಳೆಯಾಗಲಿದೆ, ಕೆಲವೊಮ್ಮೆ ಭಾರಿ ಪ್ರಮಾಣದ ಗಾಳಿ ಸಹ ಬೀಸಬಹುದು ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಆದ್ದರಿಂದ ವಾಹನ ಸವಾರರು ಮನೆಗೆ ತೆರಳುವ ಮುನ್ನ ಎಚ್ಚರಿಕೆಯಿಂದ ಇರುವುದು ಒಳಿತು.

ಮುಂದಿನ 24 ಗಂಟೆಗಳು ಉತ್ತರ ಒಳನಾಡಿನ ಬೀದರ್, ರಾಯಚೂರು, ಕೊಪ್ಪಳ, ಕಲಬುರಗಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ದಕ್ಷಿಣ ಒಳನಾಡು ಭಾಗದಲ್ಲಿ ಗಾಳಿಯ ವೇಗ 40-50 ಕಿ.ಮೀ ವೇಗದಲ್ಲಿ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಶುಕ್ರವಾರ ಮತ್ತು ಶನಿವಾರ ಭಾರಿ ಮಳೆಯಾಗಲಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...