ಬೆಂಗಳೂರು : ಬೆಂಗಳೂರಿನಲ್ಲಿ ಇಂದು ಭಾರಿ ಮಳೆಯಾಗಲಿದೆ, ವಾಹನ ಸವಾರರು, ಸಾರ್ವಜನಿಕರು ಎಚ್ಚರದಿಂದಿರಿ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರಿನಾದ್ಯಂತ ದಾಖಲೆ ಮಳೆಯಾಗಿದ್ದು ಕೆಲವೆಡೆ ಮರಗಳು ಹಾಗೂ ವಿದ್ಯುತ್ ಕಂಬಗಳು ಧರೆಗುರುಳಿ ಜನಜೀವನ ಅಸ್ತವ್ಯಸ್ಥಗೊಂಡಿರುವ ಕಾರಣ ಇಂದು ಬಿಬಿಎಂಪಿ, ಬೆಸ್ಕಾಂ, ವಿಪತ್ತು ನಿರ್ವಹಣೆ, ಪೊಲೀಸ್ ಹಾಗೂ ಅಗ್ನಿಶಾಮಕದಳ ಸೇರಿದಂತೆ 15 ಇಲಾಖೆಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮುನ್ನೆಚ್ಚರಿಕೆ ಕ್ರಮ ವಹಿಸುವಂತೆ ಹಾಗೂ ತುರ್ತು ಸನ್ನಿವೇಶಕ್ಕೆ ಸನ್ನದ್ಧರಾಗುವಂತೆ ಸೂಚಿಸಿದೆ. ಸಂಭವನೀಯ ತೊಂದರೆಗಳು ಉಂಟಾಗುವ ಕಡೆ ಈಗಾಗಲೇ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದ್ದೇನೆ ಹಾಗೂ ಬೆಂಗಳೂರಿನ ನಾಗರಿಕರಿಗೆ ಯಾವುದೇ ತೊಂದರೆಯಾಗದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಹಾಗೆಯೇ ಬಿಬಿಎಂಪಿ ಕಂಟ್ರೋಲ್ ರೂಂಗೆ ಬರುವ ಪ್ರತಿಕ್ಷಣದ ಮಾಹಿತಿಗಳನ್ನು ನಾನು ಎಲ್ಲೇ ಇದ್ದರೂ ನಿರ್ವಹಿಸಬಲ್ಲ ವ್ಯವಸ್ಥೆ ಮಾಡುವಂತೆ ಆದೇಶಿಸಿದ್ದೇನೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.