ಬೆಂಗಳೂರು : ಬೆಂಗಳೂರಿಗರಿಗೆ ಮತ್ತೆ ಚಿರತೆ ಆತಂಕ ಶುರುವಾಗಿದ್ದು, ಕೂಡ್ಲುಗೇಟ್ ಜನವಸತಿ ಪ್ರದೇಶದಲ್ಲಿ ನಿನ್ನೆ ರಾತ್ರಿ ಚಿರತೆ ಪ್ರತ್ಯಕ್ಷವಾಗಿದೆ.
ಬೆಂಗಳೂರಿನ ಕೂಡ್ಲುಗೇಟ್ ಜನವಸತಿ ಪ್ರದೇಶದಲ್ಲಿ ಚಿರತೆ ಪ್ರತ್ಯಕ್ಷವಾಗಿದ್ದು, . ಚಿರತೆ ಭಯದಲ್ಲೇ ಕೈಯಲ್ಲಿ ದೊಣ್ಣೆ ಹಿಡಿದುಕೊಂಡು ಜನ ಓಡಾಡುತ್ತಿದ್ದಾರೆ. ಆನೇಕಲ್ನ ಕೂಡ್ಲು ಗೇಟ್ ಬಳಿ ಅ.29ರ ರಾತ್ರಿಯಿಂದ ಕಾಣಿಸಿಕೊಂಡಿರುವ ಚಿರತೆ, ಅ. 30ರಂದು ಒಂದು ಅಪಾರ್ಟ್ಮೆಂಟ್ನೊಳಕ್ಕೆ ನುಗ್ಗಿದೆ. ನಿನ್ನೆ ರಾತ್ರಿ ಕೂಡಾ ಕೂಡ್ಲು ಬಳಿಯ ಐಟಿ ಟೆಕ್ ಪಾರ್ಕ್ ಬಳಿ ಚಿರತೆ ಕಾಣಿಸಿಕೊಂಡಿದೆ.
ಅಪಾರ್ಟ್ ಮೆಂಟ್ ನಿವಾಸಿಗಳು, ಸ್ಥಳೀಯ ನಿವಾಸಿಗಳು ಮನೆಯಿಂದ ಹೊರ ಬರಲು ಭಯ ಪಡುತ್ತಿದ್ದು, ಜೀವ ಭವದಲ್ಲಿ ವಾಸಿಸುತ್ತಿರುವುದಾಗಿ ಆತಂಕ ವ್ಯಕ್ತಪಡಿಸಿದ್ದಾರೆ.ಬೊಮ್ಮನಹಳ್ಳಿ, ಹೆಚ್.ಎಸ್.ಆರ್ ಲೇಔಟ್, ಬಿಟಿಎಂ ಲೇಔಟ್ ಪ್ರದೇಶಗಳ ಸುತ್ತ ಮುತ್ತ ಚಿರತೆ ಓಡಾಡುತ್ತಿದ್ದು, ಚಿರತೆ ಸೆರೆ ಹಿಡಿಯುವಂತೆ ಸಾರ್ವಜನಿಕರು ಅರಣ್ಯ ಇಲಾಖೆಗೆ ಒತ್ತಾಯಿಸಿದ್ದಾರೆ.