alex Certify BIG NEWS : ಬೆಂಗಳೂರಿಗರೇ ಗಮನಿಸಿ : ಇಂದು ಈ ರಸ್ತೆಯಲ್ಲಿ ವಾಹನ ಸಂಚಾರ ನಿರ್ಬಂಧ, ಹೀಗಿದೆ ಪರ್ಯಾಯ ಮಾರ್ಗ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ಬೆಂಗಳೂರಿಗರೇ ಗಮನಿಸಿ : ಇಂದು ಈ ರಸ್ತೆಯಲ್ಲಿ ವಾಹನ ಸಂಚಾರ ನಿರ್ಬಂಧ, ಹೀಗಿದೆ ಪರ್ಯಾಯ ಮಾರ್ಗ

ಬೆಂಗಳೂರು : ಹೊಸ ವರ್ಷಾಚರಣೆ ನಿಮಿತ್ತ ವಾಹನ ಸಂಚಾರಕ್ಕೆ ಪರ್ಯಾಯ ವ್ಯವಸ್ಥೆ ಮಾಡಲಾಗಿದೆ. ಸಾರ್ವಜನಿಕರು ಈ ಮಾರ್ಗವಾಗಿ ಸಂಚರಿಸುವಂತೆ ಕೋರಲಾಗಿದೆ.

ಎಲ್ಲೆಲ್ಲಿ ಪರ್ಯಾಯ ವ್ಯವಸ್ಥೆ

ಡಿಸೆಂಬರ್ 31 ರಂದು ರಾತ್ರಿ 8 ಗಂಟೆಯ ಬಳಿಕ ಎಂ.ಜಿ. ರಸ್ತೆಯಲ್ಲಿ, ಕ್ಲೀನ್ ವೃತ್ತದ ಕಡೆಯಿಂದ ಹಲಸೂರು ಹಾಗೂ ಮುಂದಕ್ಕೆ ಹೋಗುವ ಚಾಲಕರು ಅನಿಲ್ ಕುಂಬ್ಳೆ ವೃತ್ತದಲ್ಲಿ ಎಡ ತಿರುವು ಪಡೆದು ಸೆಂಟ್ರಲ್ ಸ್ಟ್ರೀಟ್ನಲ್ಲಿ ಸಾಗಿ ಬಿ.ಆರ್.ವಿ. ಜಂಕ್ಷನ್ನಲ್ಲಿ ಬಲ ತಿರುವು ತೆಗೆದುಕೊಂಡು ಕಬ್ಬನ್ ರಸ್ತೆ ಮೂಲಕ ಸಂಚರಿಸಿ ವೆಬ್ ಜಂಕ್ಷನ್ ಬಳಿ ಎ೦.ಜಿ.ರಸ್ತೆ ಸೇರಿ ಮುಂದೆ ಸಾಗಬಹುದು.

• ಹಲಸೂರು ಕಡೆಯಿಂದ ಕಂಟೊನ್ನೆಂಟ್ ಕಡೆಗೆ ಸಾಗುವ ವಾಹನಗಳು ಟ್ರಿನಿಟಿ ವೃತ್ತದಲ್ಲಿ ಬಲ ತಿರುವು ಪಡೆದುಕೊಂಡು ಹಲಸೂರು ರಸ್ತೆ, ಡಿಕನ್ಸನ್ ರಸ್ತೆ ಮಾರ್ಗವಾಗಿ ಸಂಚರಿಸಿ ಕಬ್ಬನ್ ರಸ್ತೆ ಸೇರಿ ಮುಂದೆ ಸಾಗುವುದು. ಕಾಮರಾಜ್ ರಸ್ತೆಯಲ್ಲಿ, ಕಬ್ಬನ್ ರಸ್ತೆ ಜಂಕ್ಷನ್ ನಿಂದ ಕಮರ್ಷಿಯಲ್ ಸ್ಟ್ರೀಟ್ ಜಂಕ್ಷನ್ವರೆಗೆ ವಾಹನಗಳ ನಿಲುಗಡೆಗೆ ಅವಕಾಶ ಕಲ್ಪಿಸಲಾಗಿದೆ.

• ಈಜಿಪುರ ಕಡೆಯಿಂದ ಬರುವ ವಾಹನಗಳು ಇಂಡಿಯಾ ಗ್ಯಾರೇಜ್ ಬಳಿ ಬಲತಿರುವು ಪಡೆದು, ಎ.ಎಸ್.ಸಿ. ಸೆಂಟರ್ನಲ್ಲಿ ಎಡತಿರುವು ಪಡೆದು ಟ್ರಿನಿಟಿ ಮೂಲಕ ಮುಂದೆ ಸಾಗುವುದು. ಎಚ್.ಎ.ಎಲ್. ಕಡೆಯಿಂದ ಬರುವ ವಾಹನಗಳು ಎ.ಎಸ್.ಸಿ. ಸೆಂಟರ್ ನಲ್ಲಿ ಬಲತಿರುವು ಪಡೆದು ಟ್ರಿನಿಟಿ ಮೂಲಕ ತೆರಳಬಹುದು.

ವಾಹನ ಸಂಚಾರ ನಿಷೇಧ ಹಾಗೂ ಪಾರ್ಕಿಂಗ್ ನಿಷೇಧ

ಎಂ.ಜಿ. ರಸ್ತೆ : ಅನಿಲ್ ಕುಂಬ್ಳೆ ವೃತ್ತದಿಂದ ಮೆಯೊ ಹಾಲ್ ಬಳಿಯ ರೆಸಿಡೆನ್ಸಿ ರಸ್ತೆ ಜಂಕ್ಷನ್‌ವರೆಗೆ
• ಬ್ರಿಗೇಡ್ ರಸ್ತೆ: ಕಾವೇರಿ ಎಂಪೋರಿಯಂ ಜಂಕ್ಷನ್‌ನಿಂದ ಅಪೇರಾ ಜಂಕ್ಷನ್‌ವರೆಗೆ
• ಚರ್ಚ್‌ ಸ್ಟ್ರೀಟ್ : ಬ್ರಿಗೇಡ್ ರಸ್ತೆ ಜಂಕ್ಷನ್‌ನಿಂದ ಮ್ಯೂಸಿಯಂ ರಸ್ತೆ ಜಂಕ್ಷನ್‌ವರೆಗೆ
• ಮ್ಯೂಸಿಯಂ ರಸ್ತೆ: ಎಂ.ಜಿ. ರಸ್ತೆ ಜಂಕ್ಷನ್‌ನಿಂದ ಹಳೇ ಮದ್ರಾಸ್ ಬ್ಯಾಂಕ್ ರಸ್ತೆ (ಎಸ್‌ಬಿಐ) ವೃತ್ತದವರೆಗೆ
• ರೆಸ್ಟ್ ಹೌಸ್ ರಸ್ತೆ: ಮ್ಯೂಸಿಯಂ ರಸ್ತೆ ಜಂಕ್ಷನ್‌ನಿಂದ ಬ್ರಿಗೇಡ್ ರಸ್ತೆ ಜಂಕ್ಷನ್‌ವರೆಗೆ
ರೆಸಿಡೆನ್ಸಿ ಕ್ರಾಸ್‌ ರಸ್ತೆ : ರೆಸಿಡೆನ್ಸಿ ರಸ್ತೆ ಜಂಕ್ಷನ್‌ನಿಂದ ಎಂ.ಜಿ. ರಸ್ತೆ ಜಂಕ್ಷನ್‌ವರೆಗೆ (ಶಂಕರ್‌ನಾಗ್ ಚಿತ್ರಮಂದಿರ)

 

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...