alex Certify ಮೃತ್ಯುಕೂಪವಾದ ರಸ್ತೆ: ಬೆಂಗಳೂರಲ್ಲಿ ಯಮಸ್ವರೂಪಿ ರಸ್ತೆ ಗುಂಡಿಗೆ ಮಹಿಳೆ ಬಲಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮೃತ್ಯುಕೂಪವಾದ ರಸ್ತೆ: ಬೆಂಗಳೂರಲ್ಲಿ ಯಮಸ್ವರೂಪಿ ರಸ್ತೆ ಗುಂಡಿಗೆ ಮಹಿಳೆ ಬಲಿ

ಬೆಂಗಳೂರು: ಬೆಂಗಳೂರಿನಲ್ಲಿ ರಸ್ತೆ ಗುಂಡಿಗೆ ಮತ್ತೊಬ್ಬ ಮಹಿಳೆ ಬಲಿಯಾಗಿದ್ದಾರೆ, ಕೆಎಸ್ಆರ್ಟಿಸಿ ಬಸ್ ಹರಿದು ಗಾಯಗೊಂಡಿದ್ದ ಮಹಿಳೆ ಮೃತಪಟ್ಟಿದ್ದಾರೆ.

ಮಲ್ಲೇಶ್ವರ ಸಂಚಾರ ಠಾಣೆ ವ್ಯಾಪ್ತಿಯಲ್ಲಿ ಬೆಂಗಳೂರಿನ ಸುಜಾತ ಥಿಯೇಟರ್ ಬಳಿ ರಸ್ತೆ ಗುಂಡಿ ತಪ್ಪಿಸಲು ಹೋಗಿ ಸ್ಕೂಟಿಯಿಂದ ಮಹಿಳೆ ಬಿದ್ದಿದ್ದರು. ರಸ್ತೆಯಲ್ಲಿ ಬಿದ್ದಿದ್ದ ಉಮಾದೇವಿ ಅವರ ಮೇಲೆ ಬಸ್ ಹರಿದಿತ್ತು. ಆಸ್ಪತ್ರೆಗೆ ದಾಖಲಾಗಿದ್ದ 50 ವರ್ಷದ ಉಮಾದೇವಿ ಚಿಕಿತ್ಸೆ ಫಲಕಾರಿಯಾಗದೆ ರಾಜಾಜಿನಗರದ ಇಎಸ್ಐ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಮಗಳೊಂದಿಗೆ ಸ್ಕೂಟಿಯಲ್ಲಿ ತೆರಳುವಾಗ ರಸ್ತೆ ಗುಂಡಿಯಿಂದ ಕೆಳಗೆ ಬಿದ್ದ ಉಮಾದೇವಿ ಅವರ ಮೇಲೆ ಬಸ್ ಹರಿದು ಗಂಭೀರವಾಗಿ ಗಾಯಗೊಂಡಿದ್ದರು, ಬಸ್ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...