alex Certify BIG NEWS: ರಸ್ತೆಯಲ್ಲಿ ಆಯಿಲ್ ಚೆಲ್ಲಿ ಅವಾಂತರ; ಸ್ಕಿಡ್ ಆಗಿ ಬಿದ್ದ 10ಕ್ಕೂ ಹೆಚ್ಚು ಬೈಕ್ ಸವಾರರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ರಸ್ತೆಯಲ್ಲಿ ಆಯಿಲ್ ಚೆಲ್ಲಿ ಅವಾಂತರ; ಸ್ಕಿಡ್ ಆಗಿ ಬಿದ್ದ 10ಕ್ಕೂ ಹೆಚ್ಚು ಬೈಕ್ ಸವಾರರು

ಬೆಂಗಳೂರು: ರಾಜದಾನಿ ಬೆಂಗಳೂರಿನ ರಸ್ತೆಯಲ್ಲಿ ಆಯಿಲ್ ಚೆಲ್ಲಿ ಅವಾಂತರ ಸೃಷ್ಟಿಯಾಗಿದೆ. ಆಯಿಲ್ ಚಿಲ್ಲಿರುವ ಪರಿಣಾಮ ವಾಹನ ಸವಾರರು ಸ್ಕಿಡ್ ಆಗಿ ಬಿದ್ದು ಗಾಯಗೊಂಡಿರುವ ಘಟನೆ ನಡೆದಿದೆ.

ಮೈಸೂರು ರಸ್ತೆಯಲ್ಲಿ ರಸ್ತೆ ತುಂಬೆಲ್ಲ ಆಯಿಲ್ ಚೆಲ್ಲಿದ್ದು, 10ಕ್ಕೂ ಹೆಚ್ಚು ಬೈಕ್ ಸವಾರರು ಸ್ಕಿಡ್ ಆಗಿ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದಾರೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಚಿಕ್ಕಪೇಟೆ ಸಂಚಾರಿ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಸ್ಥಳಕ್ಕೆ ಆಗಮಿಸಿರುವ ಪೊಲೀಸರು, ಪಾಲಿಕೆ ಸಿಬ್ಬಂದಿಗಳು ಆಯಿಲ್ ಚೆಲ್ಲಿದ ಜಾಗದಲ್ಲಿ ಮಣ್ಣು ಹಾಕಿ ಆಯಿಲ್ ತೆಗೆಯುವ ಕಾರ್ಯದಲ್ಲಿ ನಿರತರಾಗಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...