ಬೆಂಗಳೂರು : ಸಿಎಂ ಸಿದ್ದರಾಮಯ್ಯರ ಹಳೆ ಮನೆಯ ಸಮೀಪದಲ್ಲೇ ದರೋಡೆ ನಡೆದಿದ್ದು, ಒಂದೂವರೆ ಕೆಜಿ ಚಿನ್ನ ಹಾಗೂ ಹಣವನ್ನು ಖದೀಮರು ಕದ್ದೊಯ್ದಿದ್ದಾರೆ.
ಬೆಂಗಳೂರಿನ ಶೇಷಾದ್ರಿಪುರಂನ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ರಾಜಸ್ಥಾನ ಮೂಲದ ಮಹಿಳೆಯ ಮನೆಯಲ್ಲಿ ಕಳ್ಳತನ ನಡೆದಿದೆ, ಮನೆಯವರು ಕುಟುಂಬ ಸಮೇತ ಪ್ರವಾಸಕ್ಕೆ ಹೋಗಿದ್ದಾಗ ಮನೆಗೆ ನುಗ್ಗಿದ ಖದೀಮರು ಮನೆಯ ಬಾಗಿಲು ಒಡೆದು ಚಿನ್ನಾಭರಣ, ಹಣ ಕದ್ದೊಯ್ದಿದ್ದಾರೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.