ಬೆಂಗಳೂರು: ಬೆಂಗಳೂರಿನ ಬೈಯ್ಯಪ್ಪನಹಳ್ಳಿಯಲ್ಲಿ ರೌಡಿಶೀಟರ್ ಕೊಲೆ ಮಾಡಲಾಗಿದೆ. ಕೃಷ್ಣಯ್ಯನಪಾಳ್ಯದಲ್ಲಿ ತಡರಾತ್ರಿ ರೌಡಿಶೀಟರ್ ನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.
ಮಾರಕಾಸ್ತ್ರಗಳಿಂದ ಕೊಚ್ಚಿ ರಾಹುಲ್ ಅಲಿಯಾಸ್ ಪಲ್ಲು ಹತ್ಯೆ ಮಾಡಲಾಗಿದೆ. ಆಟೋದಲ್ಲಿ ಬಂದಿದ್ದ ದುಷ್ಕರ್ಮಿಗಳು ಕೊಲೆ ಮಾಡಿ ಪರಾರಿಯಾಗಿದ್ದಾರೆ. ಹಳೆ ದ್ವೇಷದ ಹಿನ್ನೆಲೆಯಲ್ಲಿ ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ.
ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದ ರೌಡಿಶೀಟರ್ ರಾಹುಲ್ ಇತ್ತೀಚೆಗಷ್ಟೇ ಜೈಲಿನಿಂದ ಹೊರ ಬಂದಿದ್ದ. ಬೈಯ್ಯಪ್ಪನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.