ಬೆಂಗಳೂರು: ಮಳೆ ನೀರು ನುಗ್ಗಿದ ಮನೆಗಳಿಗೆ 10,000 ರೂ. ನೀಡಲು ಬಿಬಿಎಂಪಿ ಮುಂದಾಗಿದೆ. ಅಧಿಕಾರಿಗಳಿಂದ ಮಹಜರು ಪ್ರಕ್ರಿಯೆ ನಡೆಸಲಾಗುತ್ತಿದ್ದು, ಸಂತ್ರಸ್ತರ ಬ್ಯಾಂಕ್ ಖಾತೆಗೆ ನೇರವಾಗಿ ಹಣ ಜಮಾ ಮಾಡಲಾಗುತ್ತದೆ.
ಬೆಂಗಳೂರು ಮಹಾನಗರದಲ್ಲಿ ಕಳೆದ ನಾಲ್ಕು ದಿನ ಸುರಿದ ಭಾರಿ ಮಳೆಯಿಂದ ಮನೆಗೆ ನೀರು ನುಗ್ಗಿ ತೊಂದರೆಗೆ ಒಳಗಾದ ಪ್ರತಿ ಕುಟುಂಬಗಳಿಗೆ 10000 ರೂ. ಪರಿಹಾರ ನೀಡಲಾಗುವುದು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ತಿಳಿಸಿದ್ದಾರೆ.
ಬೊಮ್ಮನಹಳ್ಳಿ ಸೇರಿದಂತೆ ಬೆಂಗಳೂರಿನಲ್ಲಿ ಮಂಗಳವಾರ ಸುರಿದ ಮಳಿಗೆ 15 ಮನೆಗಳಿಗೆ ನೀರು ನುಗ್ಗಿದೆ. ಕಳೆದ ಶನಿವಾರದಿಂದ ಸೋಮವಾರದ ಮಳೆ 73 ಮನೆಗಳಿಗೆ ನೀರು ನುಗ್ಗಿದೆ. ಈ ಮನೆಗಳಲ್ಲಿ ವಾಸವಿದ್ದವರ ಖಾತೆಗೆ ತಲಾ 10 ಸಾವಿರ ರೂಪಾಯಿ ಪರಿಹಾರ ನೀಡಲಾಗುವುದು. ಅಧಿಕಾರಿಗಳು ಮಾಹಿತಿ ಸಂಗ್ರಹಿಸಿ ಮಹಜರು ಪ್ರಕ್ರಿಯೆ ಕೈಗೊಂಡಿದ್ದು, ಅದು ಪೂರ್ಣಗೊಂಡ ಬಳಿಕ ಖಾತೆಗೆ ಹಣ ಜಮಾ ಮಾಡಲಾಗುವುದು ಎಂದು ಹೇಳಿದ್ದಾರೆ.