ಬೆಂಗಳೂರು: ಬೆಂಗಳೂರಿನ ಮಲ್ಲೇಶ್ವರಂ ಸ್ಯಾಂಕಿ ಕೆರೆಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ. ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.
ವ್ಯಕ್ತಿಯ ಶವ ಸ್ಯಾಂಕಿ ಕೆರೆಯಲ್ಲಿ ತೆಲುತ್ತಿರುವುದನ್ನು ಉದ್ಯಾನವನದ ಸಿಬ್ಬಂದಿಗಳು ಗಮನಿಸಿದ್ದಾರೆ. ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಘಟನಾ ಸ್ಥಳಕ್ಕೆ ಸದಾಶಿವನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಸುಮಾರು 50 ವರ್ಷದ ವ್ಯಕ್ತಿಯ ಶವ ಕೆರೆಯಲ್ಲಿ ತೇಲುತ್ತಿದ್ದು, ಆತ್ಮಹತ್ಯೆ ಮಾಡಿಕೊಂಡಿರುವ ಅನುಮಾನ ವ್ಯಕ್ತವಾಗಿದೆ. ಕೆರೆಯಿಂದ ಶವವನ್ನು ಹೊರತೆಗೆಯಲಾಗಿದ್ದು, ತನಿಖೆ ಬಳಿಕವೇ ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.