alex Certify ಬೆಂಗಳೂರಿನಲ್ಲಿ ಭಾರೀ ಮಳೆ ಮುನ್ಸೂಚನೆ: ನಗರ ಜಿಲ್ಲೆಯಾದ್ಯಂತ ಶಾಲೆಗಳಿಗೆ ರಜೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಂಗಳೂರಿನಲ್ಲಿ ಭಾರೀ ಮಳೆ ಮುನ್ಸೂಚನೆ: ನಗರ ಜಿಲ್ಲೆಯಾದ್ಯಂತ ಶಾಲೆಗಳಿಗೆ ರಜೆ

ಬೆಂಗಳೂರು: ಬೆಂಗಳೂರು ನಗರ ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆಯಾಗುತ್ತಿದ್ದು,  ದಿನಾಂಕ 16.10.2024 ಮತ್ತು 17.10.2024 ರಂದು ಹವಾಮಾನ ಇಲಾಖೆಯು ನೀಡಿರುವ  ಆರೆಂಜ್‍  ಅಲರ್ಟ್‍  ಮುನ್ಸೂಚನೆಯಂತೆ  ಮಳೆಯ ತೀವ್ರತೆ ಹೆಚ್ಚಾಗುವುದರಿಂದ ಮುಂಜಾಗ್ರತೆ ಕ್ರಮವಾಗಿ ಹಾಗೂ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ದಿನಾಂಕ 16.10.2024 ರಂದು ಬೆಂಗಳೂರು ನಗರ ಜಿಲ್ಲೆಯ  ಎಲ್ಲಾ ತಾಲೂಕಿನ ಅಂಗನವಾಡಿ ಕೇಂದ್ರಗಳಿಗೆ, ಸರ್ಕಾರಿ ಹಾಗೂ ಖಾಸಗೀ / ಅನುದಾನಿತ ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆಯನ್ನು ಘೋಷಿಸಿ ಬೆಂಗಳೂರು ನಗರ  ಜಿಲ್ಲಾ  ವಿಪತ್ತು ನಿರ್ವಾಹಣಾ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಬೆಂಗಳೂರು ನಗರ ಜಿಲ್ಲಾಧಿಕಾರಿಗಳಾದ ಜಗದೀಶ ಜಿ. ಆದೇಶಿಸಿದ್ದಾರೆ.

ಉಳಿದಂತೆ ಎಲ್ಲಾ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮಾ, ಇಂಜಿನಿಯರಿಂಗ್, ಐ.ಟಿ.ಐ.ಗಳಿಗೆ ರಜೆ  ಘೋಷಿಸಿರುವುದಿಲ್ಲ.

ಕಾಲೇಜುಗಳಲ್ಲಿ ಪಾಠ ಪ್ರವಚನಗಳನ್ನು ನಡೆಸುವಾಗ ಕೆಲವೊಂದು ಅಂಶಗಳನ್ನು ಪರಿಗಣಿಸುವಂತೆ ಕಾಲೇಜುಗಳ ಮುಖ್ಯಸ್ಥರಿಗೆ ಹಾಗೂ ಸಂಬಂಧಪಟ್ಟವರಿಗೆ ಸಾಮಾನ್ಯ ಸೂಚನೆಯನ್ನು ನೀಡಲಾಗಿದ್ದು, ಕಾಲೇಜು ಮುಖ್ಯಸ್ಥರು ವಿದ್ಯಾರ್ಥಿಗಳು ಕಾಲೇಜಿಗೆ ಆಗಮಿಸುವಾಗ ಹಾಗೂ ಮನೆಗೆ ತೆರಳುವ ಸಂದರ್ಭದಲ್ಲಿ ಯಾವುದೇ ಅಪಾಯವಿಲ್ಲದೇ ಸುರಕ್ಷಿತವಾಗಿ ತಲುಪುವ ಬಗ್ಗೆ ಗಮನವಹಿಸುವುದು. ದುರ್ಬಲ /ಶಿಥಿಲ ಕಟ್ಟಡಗಳು ಇದ್ದಲ್ಲಿ ಅಂತಹ ಕಟ್ಟಡಗಳನ್ನು ಪಾಠ ಪ್ರವಚನಗಳಿಗೆ ಬಳಸುವಂತಿಲ್ಲ. ಈ ನಿಟ್ಟಿನಲ್ಲಿ ಕಾಲೇಜುಗಳ ಮುಖ್ಯಸ್ಥರು ಕಾಲೇಜು ಕಟ್ಟಡಗಳ ಸುಸ್ಥಿತಿಯ ಬಗ್ಗೆ ಗಮನಹರಿಸುವುದು ಹಾಗೂ ಯಾವುದೇ ಅವಘಡಗಳು ಉಂಟಾಗದಂತೆ ಸೂಕ್ತ ಕ್ರಮವಹಿಸುವಂತೆ ಜಿಲ್ಲಾಧಿಕಾರಿಗಳು ಸೂಚಿಸಿರುತ್ತಾರೆ.

ಮುಂಜಾಗ್ರತಾ ಕ್ರಮವಾಗಿ ರಜೆಯನ್ನು ನೀಡಿ ಉಂಟಾಗಿರುವ ಕಲಿಕಾ ಸಮಯ ಕೊರತೆಯನ್ನು ಶನಿವಾರ ಮಧ್ಯಾಹ್ನ ಅಥವಾ ಭಾನುವಾರಗಳಂದು ಹೆಚ್ಚುವರಿ ತರಗತಿಗಳನ್ನು ನಡೆಸಿ ನಷ್ಟವನ್ನು ಸರಿದೂಗಿಸುವಂತೆ ತಿಳಿಸಿದ್ದು, ವಿದ್ಯಾರ್ಥಿಗಳ ಪೋಷಕರು/ಕಾಲೇಜು ಮುಖ್ಯಸ್ಥರು, ವಿದ್ಯಾರ್ಥಿಗಳು ನೀರು ಇರುವ ತಗ್ಗು ಪ್ರದೇಶಗಳಿಗೆ ಹೋಗದಂತೆ ಜಾಗ್ರತೆ ವಹಿಸಲು ಅವರು ಸೂಚಿಸಿರುತ್ತಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...