![](https://kannadadunia.com/wp-content/uploads/2023/12/bengaluru-school-.jpg)
ಬೆಂಗಳೂರು: ಬೆಂಗಳೂರಿನ ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ತೀವ್ರಗೊಳಿಸಿರುವ ಪೊಲೀಸರು ಎರಡು ಪ್ರಮುಖ ಪ್ರಕ್ರಿಯೆ ಮೊರೆ ಹೋಗಿದ್ದಾರೆ.
ಪ್ರಕರಣವನ್ನು ಭೇದಿಸಲು ವಿದೇಶಿ ಕೋರ್ಟ್ ಹಾಗೂ ಇಂಟರ್ ಪೋಲ್ ಮೊರೆ ಹೋಗಿದ್ದಾರೆ. ಈ ಮೂಲಕ ಬಾಂಬ್ ಬೆದರಿಕೆ ಜಾಡು ಪತ್ತೆ ಮಾಡಲು ಮುಂದಾಗಿದ್ದಾರೆ. ಸ್ವಿಡ್ಜರ್ಲ್ಯಾಂಡ್ ಮೂಲದಿಂದ ಬೆದರಿಕೆ ಬಂದಿರುವ ಮಾಹಿತಿ ಹಿನ್ನೆಲೆಯಲ್ಲಿ ವಿದೇಶಿ ಕೋರ್ಟ್ ಮೂಲಕವೂ ಪ್ರಕರಣ ಪತ್ತೆ ಹಚ್ಚಲು ಯತ್ನಿಸಿದ್ದಾರೆ.
ಸಂಪೂರ್ಣ ಮಾಹಿತಿ ಕಲೆಹಾಕಿ ಆರೋಪಿಗಳನ್ನು ಪತ್ತೆ ಮಾಡುವ ನಿಟ್ಟಿನಲ್ಲಿ ಬೆಂಗಳೂರು ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ ಎಂದು ತಿಳಿದುಬಂದಿದೆ.