ಬೆಂಗಳೂರು : ಬೆಂಗಳೂರಿನ ಪ್ರತಿಷ್ಟಿತ ಮಾಲ್ ನಲ್ಲಿ ಯುವತಿಗೆ ಲೈಂಗಿಕ ಕಿರುಕುಳ ನೀಡಿರುವ ಘಟನೆ ನಡೆದಿದ್ದು, ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಬೆಂಗಳೂರಿನ ಪ್ರತಿಷ್ಟಿತ ಲುಲು ಮಾಲ್ ನಲ್ಲಿ ಈ ಘಟನೆ ನಡೆದಿದೆ ಎಂದು ಹೇಳಲಾಗಿದ್ದು, ಈ ಬಗ್ಗೆ ನಿಖರ ಮಾಹಿತಿ ಲಭ್ಯವಾಗಿಲ್ಲ. ಯುವತಿಗೆ ಕಿರುಕುಳ ನೀಡಿರುವ ವಿಡಿಯೋ ವೈರಲ್ ಆಗಿದೆ. ನಿನ್ನೆ ಸಂಜೆ 6.30ರ ಸುಮಾರಿಗೆ ಬೆಂಗಳೂರಿನ ಲುಲು ಮಾಲ್ನಲ್ಲಿ ನಡೆದಿದೆ.
ವ್ಯಕ್ತಿಯೋರ್ವ ಬೇಕಂತಲೇ ಯುವತಿಯ ಹಿಂಭಾಗಕ್ಕೆ ಹೋಗಿ ಡಿಕ್ಕಿ ಹೊಡೆದು ಆಕೆಯ ಹಿಂಭಾಗವನ್ನು ಮುಟ್ಟಿರುವುದು ವಿಡಿಯೋನಲ್ಲಿ ಸೆರೆಯಾಗಿದ್ದು, ಇದೀಗ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಆರೋಪಿಯನ್ನು ಬಂಧಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹ ವ್ಯಕ್ತವಾಗಿದೆ.