alex Certify BREAKING : ಬೆಂಗಳೂರಲ್ಲಿಒಂಟಿ ಮಹಿಳೆ ಕಾರನ್ನು ಚೇಸ್ ಮಾಡಿ ಕಿರುಕುಳ ಪ್ರಕರಣ ; ಮೂವರು ಪುಂಡರು ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಬೆಂಗಳೂರಲ್ಲಿಒಂಟಿ ಮಹಿಳೆ ಕಾರನ್ನು ಚೇಸ್ ಮಾಡಿ ಕಿರುಕುಳ ಪ್ರಕರಣ ; ಮೂವರು ಪುಂಡರು ಅರೆಸ್ಟ್

ಬೆಂಗಳೂರು : ಮಹಿಳೆ ಕಾರನ್ನು ಚೇಸ್ ಮಾಡಿ ಪುಂಡರು ಕಿರುಕುಳ ನೀಡಿದ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು, ಪ್ರಕರಣ ಸಂಬಂಧ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.

ಕ್ಷುಲ್ಲಕ ಕಾರಣಕ್ಕೆ ಒಂದೇ ಬೈಕ್ ನಲ್ಲಿ ತೆರಳುತ್ತಿದ್ದ ಮೂವರು ಯುವಕರು ಮಹಿಳೆ ಜೊತೆ ಕಿರಿಕ್ ತೆಗೆದಿದ್ದಾರೆ. ಅಲ್ಲದೇ ಕಾರಿನ ಡೋರ್ ತೆಗೆಯಲು ಯತ್ನಿಸಿದ್ದಾರೆ. ಭಯದಿಂದ ಮಹಿಳೆ ಅಳುತ್ತಲೇ ಪೊಲೀಸರಿಗೆ ಕರೆ ಮಾಡಿ ರಕ್ಷಣೆ ನೀಡುವಂತೆ ಮನವಿ ಮಾಡಿದ್ದಾಳೆ.

ಈ ದೃಶ್ಯವನ್ನು ತನ್ನ ಮೊಬೈಲ್ ನಲ್ಲಿ ಮಹಿಳೆ ವಿಡಿಯೋ ರೆಕಾರ್ಡ್ ಮಾಡಿದ್ದಾಳೆ. ಕೋರಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ತಡರಾತ್ರಿ ಒಂಟಿ ಮಹಿಳೆ ಜೊತೆ ಗಲಾಟೆ ಮಾಡಿದ ಪುಂಡರನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.ಜಗನ್ನಾಥ್, ತೇಜಸ್ ಸೇರಿ ಮೂವರನ್ನು ಬಂಧಿಸಲಾಗಿದ್ದು, ಬಂಧಿತರನ್ನು ಶೇಷಾದ್ರಿಪುರಂ ನಿವಾಸಿಗಳು ಎಂದು ಗುರುತಿಸಲಾಗಿದೆ.

 

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...