alex Certify ಅಮೆರಿಕದಲ್ಲಿ ಓದಿ, ರಾಜಕೀಯ ಅಂತ್ಯಕಾಲದಲ್ಲಿ ಬಿಜೆಪಿ ಸೇರಿದ ಎಸ್.ಎಂ. ಕೃಷ್ಣ ನಡೆದು ಬಂದ ಹಾದಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಮೆರಿಕದಲ್ಲಿ ಓದಿ, ರಾಜಕೀಯ ಅಂತ್ಯಕಾಲದಲ್ಲಿ ಬಿಜೆಪಿ ಸೇರಿದ ಎಸ್.ಎಂ. ಕೃಷ್ಣ ನಡೆದು ಬಂದ ಹಾದಿ

ಬೆಂಗಳೂರು: 1962 ರಲ್ಲಿ ಮೊದಲ ಬಾರಿಗೆ ವಿಧಾನಸಭೆಗೆ ಆಯ್ಕೆಯಾಗಿದ್ದ ಎಸ್.ಎಂ. ಕೃಷ್ಣ 1968ರಲ್ಲಿ ಲೋಕಸಭೆಗೆ ಚುನಾಯಿತರಾಗಿದ್ದರು.

1971ರಲ್ಲಿ ಮರು ಚುನಾವಣೆಯನ್ನು ಎದುರಿಸಿ ಗೆದ್ದಿದ್ದರು. 1972 ರಲ್ಲಿ ಕರ್ನಾಟಕ ವಿಧಾನ ಪರಿಷತ್ ಸದಸ್ಯರಾಗಿದ್ದರು. ವಾಣಿಜ್ಯ, ಉದ್ಯಮ, ಸಂಸದೀಯ ವ್ಯವಹಾರಗಳ ಸಚಿವರಾಗಿದ್ದರು. 1983ರಲ್ಲಿ ಉದ್ಯಮ ಖಾತೆ, 1984 ರಲ್ಲಿ ವಿತ್ತ ಖಾತೆ ಸಚಿವರಾಗಿದ್ದರು. 1998 ರಿಂದ 94 ರವರೆಗೆ ಉಪಮುಖ್ಯಮಂತ್ರಿಯಾಗಿದ್ದರು. 1996ರಲ್ಲಿ ರಾಜ್ಯಸಭೆಗೆ ನೇಮಕವಾಗಿದ್ದರು.

ಶಿಕ್ಷಣ

ಎಸ್.ಎಂ. ಕೃಷ್ಣ ಅವರು ಮೈಸೂರು ಮಹಾರಾಜ ಕಾಲೇಜಿನಲ್ಲಿ ಪದವೀಧರರಾದ ನಂತರ ಬೆಂಗಳೂರಿನ ಸರ್ಕಾರಿ ಕಾನೂನು ಕಾಲೇಜಿನಲ್ಲಿ ಓದಿದರು. ಇದರ ನಂತರ ಅಮೆರಿಕದ ಟೆಕ್ಸಸ್ ರಾಜ್ಯದಲ್ಲಿರುವ ಸದರ್ನ್ ಮೆಥಡಿಸ್ಟ್ ವಿಶ್ವವಿದ್ಯಾಲಯದಲ್ಲಿ ಓದಿ ನಂತರ ವಾಷಿಂಗ್ಟನ್ ನಲ್ಲಿರುವ ಜಾರ್ಜ್ ವಾಷಿಂಗ್ಟನ್ ವಿಶ್ವವಿದ್ಯಾಲಯದಲ್ಲಿ ಪ್ರತಿಷ್ಠಿತ ಫುಲ್‍ಬ್ರೈಟ್ ವಿದ್ಯಾರ್ಥಿವೇತನವನ್ನು ಪಡೆದರು.

ರಾಜಕೀಯ ಜೀವನ

ಭಾರತಕ್ಕೆ ಮರಳಿದ ನಂತರ ಬೆಂಗಳೂರಿನ ರೇಣುಕಾಚಾರ್ಯ ಕಾಲೇಜಿನಲ್ಲಿ ಸ್ವಲ್ಪ ಕಾಲ ಅಂತಾರಾಷ್ಟ್ರೀಯ ನ್ಯಾಯದ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದರು. 1962ರಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಮದ್ದೂರಿನಲ್ಲಿ ಗೆದ್ದು ವಿಧಾನಸಭೆಗೆ ಮೊದಲ ಬಾರಿ ಆಯ್ಕೆಯಾಗಿದ್ದರು.

1972ರಲ್ಲಿ ಕರ್ನಾಟಕ ವಿಧಾನ ಪರಿಷತ್ತಿಗೆ ಚುನಾಯಿತರಾಗಿದ್ದ ಅವರು ಇದೇ ಸಮಯದಲ್ಲಿ ವಾಣಿಜ್ಯ, ಉದ್ಯಮ ಮತ್ತು ಸಂಸದೀಯ ವ್ಯವಹಾರಗಳ ಸಚಿವರಾದರು. 1983ರಲ್ಲೂ ಉದ್ಯಮ ಖಾತೆ ಮತ್ತು 1984ರಲ್ಲಿ ವಿತ್ತ ಖಾತೆಯ ಸಚಿವರಾದರು.

1989ರಿಂದ 1992ರ ವರೆಗೆ ವಿಧಾನಸಭೆಯ ಸ್ಪೀಕರ್ ಆಗಿ ನೇಮಿತರಾದರು. 1992ರಿಂದ 1994ರ ವರೆಗೆ ಕರ್ನಾಟಕದ ಉಪ-ಮುಖ್ಯಮಂತ್ರಿಗಳಾದರು. 1996ರಲ್ಲಿ ರಾಜ್ಯಸಭೆಗೆ ನೇಮಕಗೊಂಡ ಕೃಷ್ಣ1999ರಲ್ಲಿ ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಮಾಡಿದರು. 1999ರಿಂದಲೇ ಕರ್ನಾಟಕ ಪ್ರದೇಶ ಕಾಂಗ್ರೆಸ್ ಕಮಿಟಿಯ ಅಧ್ಯಕ್ಷರಾಗಿದ್ದರು. ವಿದೇಶಗಳಲ್ಲಿ ಎರಡು ಬಾರಿ(ವಿಶ್ವಸಂಸ್ಥೆಯಲ್ಲಿ ಒಮ್ಮೆ, ಮತ್ತು ಕಾಮನ್ ವೆಲ್ತ್ ಒಕ್ಕೂಟದಲ್ಲಿ ಒಮ್ಮೆ) ಭಾರತವನ್ನು ಪ್ರತಿನಿಧಿಸಿದ್ದಾರೆ.

ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ

ಜನವರಿ 28, 2017ರಂದು ಎಸ್.ಎಂ.ಕೃಷ್ಣ ಅಧಿಕೃತವಾಗಿ ಕಾಂಗ್ರೆಸ್ ನ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಘೋಷಣೆ ಮಾಡಿದರು. ಬೆಂಗಳೂರಿನಲ್ಲಿರುವ ತಮ್ಮ ನಿವಾಸದಲ್ಲಿ ತುರ್ತು ಪತ್ರಿಕಾ ಗೋಷ್ಠಿ ನಡೆಸಿ ‘ ಕಾಂಗ್ರೆಸ್ ಪಕ್ಷವನ್ನು ತ್ಯಜಿಸುತ್ತಿದ್ದೇನೆ’ ಎಂದು ಅಧಿಕೃತವಾಗಿ ಘೋಷಣೆ ಮಾಡಿದರು. ಬಿಜೆಪಿಗೆ ಸೇರ್ಪಡೆಯಾಗಿದ್ದರು. ರಾಜಕೀಯ ಅಂತ್ಯಕಾಲದಲ್ಲಿ ಬಿಜೆಪಿ ಸೇರಿದ ಎಸ್.ಎಂ. ಕೃಷ್ಣ ಸಕ್ರಿಯ ರಾಜಕಾರಣದಿಂದ ದೂರವಿದ್ದರು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...