
ಬೆಂಗಳೂರು: ಬೆಂಗಳೂರಿನಲ್ಲಿ ಸುಮ್ಮನೆ ಕುಳಿತಿದ್ದ ಇಬ್ಬರಿಗೆ ಚಾಕುವಿನಿಂದ ಇರಿಯಲಾಗಿದೆ. ಮೆಜೆಸ್ಟಿಕ್ ಗಣಪತಿ ದೇವಸ್ಥಾನದ ಬಳಿ ಕಟ್ಟೆ ಮೇಲೆ ಕುಳಿತಿದ್ದ ಇಬ್ಬರಿಗೆ ಅಪರಿಚಿತ ವ್ಯಕ್ತಿ ಚಾಕುವಿನಿಂದ ಇರಿದಿದ್ದಾನೆ. ಬಿಡಿಸಲು ಮುಂದಾದ ವ್ಯಕ್ತಿಗೂ ದುಷ್ಕರ್ಮಿ ಚಾಕುವಿನಿಂದ ಇರಿದಿದ್ದಾನೆ.
ಗಾಯಾಳುಗಳನ್ನು ಕೆಸಿ ಜನರಲ್ ಆಸ್ಪತ್ರೆಗೆ ಪೊಲೀಸರು ದಾಖಲಿಸಿದ್ದಾರೆ. ಗಾಯಾಳುಗಳಲ್ಲಿ ಒಬ್ಬರಾದ ಮಲ್ಲಿನಾಥ ಬಿರಾದಾರ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಉಪ್ಪಾರಪೇಟೆ ಪೊಲೀಸ್ ಠಾಣ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.