alex Certify BIG NEWS: 3 ಜಿಲ್ಲೆಗಳಲ್ಲಿ ಶೂನ್ಯ, 5 ಜಿಲ್ಲೆಗಳಲ್ಲಿ ಏರಿದ ಕೊರೋನಾ -ಇಲ್ಲಿದೆ ಎಲ್ಲ ಜಿಲ್ಲೆಗಳ ವಿವರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: 3 ಜಿಲ್ಲೆಗಳಲ್ಲಿ ಶೂನ್ಯ, 5 ಜಿಲ್ಲೆಗಳಲ್ಲಿ ಏರಿದ ಕೊರೋನಾ -ಇಲ್ಲಿದೆ ಎಲ್ಲ ಜಿಲ್ಲೆಗಳ ವಿವರ

ಬೆಂಗಳೂರು: ರಾಜ್ಯದಲ್ಲಿ ಇಂದು ಕೊರೋನಾ ಸೋಂಕು ಹೆಚ್ಚಾಗಿದ್ದು, 1805 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ.

ಒಟ್ಟು ಸೋಂಕಿತರ ಸಂಖ್ಯೆ 29,15,317 ಕ್ಕೆ ಏರಿಕೆಯಾಗಿದೆ. ಇದುವರೆಗೆ 36,741 ಸೋಂಕಿತರು ಮೃತಪಟ್ಟಿದ್ದಾರೆ. 28,54,222 ಜನ ಗುಣಮುಖರಾಗಿದ್ದಾರೆ. ಇವತ್ತು 1854 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಪಾಸಿಟಿವಿಟಿ ದರ ಶೇಕಡ 1.11 ರಷ್ಟು ಇದೆ. 24,328 ಸಕ್ರಿಯ ಪ್ರಕರಣಗಳು ಇವೆ. ರಾಜ್ಯದಲ್ಲಿ ಇಂದು 1,62,338 ಪರೀಕ್ಷೆ ನಡೆಸಲಾಗಿದೆ.

ರಾಜಧಾನಿ ಬೆಂಗಳೂರಿನಲ್ಲಿಂದು 441 ಜನರಿಗೆ ಕೊರೊನಾ ಸೋಂಕು ತಗಲಿದ್ದು, 7 ಜನ ಸೋಂಕಿತರು ಸಾವನ್ನಪ್ಪಿದ್ದಾರೆ. 434 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 8560 ಸಕ್ರಿಯ ಪ್ರಕರಣಗಳಿವೆ.

ಜಿಲ್ಲೆಗಳ ವಿವರ:

ಮೂರು ಜಿಲ್ಲೆಗಳಲ್ಲಿ ಇಂದು ಯಾವುದೇ ಪ್ರಕರಣ ಕಂಡುಬಂದಿಲ್ಲ. ಯಾದಗಿರಿ, ಗದಗ ಹಾಗೂ ಬಾಗಲಕೋಟೆ ಜಿಲ್ಲೆಯಲ್ಲಿ ಯಾವುದೇ ಪ್ರಕರಣ ಕಂಡುಬಂದಿಲ್ಲ.

ಬೆಂಗಳೂರು ನಗರ 441, ದಕ್ಷಿಣ ಕನ್ನಡ 411, ಹಾಸನ 103, ಮೈಸೂರು 90, ಉಡುಪಿ ಜಿಲ್ಲೆಯಲ್ಲಿ 153 ಜನರಿಗೆ ಸೋಂಕು ತಗುಲಿದೆ.

ಬೆಂಗಳೂರು ನಗರ 7, ಚಿಕ್ಕಬಳ್ಳಾಪುರ 2, ಚಿತ್ರದುರ್ಗ 2, ದಕ್ಷಿಣ ಕನ್ನಡ 3, ಧಾರವಾಡ 2, ಹಾಸನ 3, ಹಾವೇರಿ 1, ಕೋಲಾರ 5, ಮಂಡ್ಯ 3, ಮೈಸೂರು 4, ಶಿವಮೊಗ್ಗ 1, ಉಡುಪಿ 2 ಜನ ಸೇರಿದಂತೆ ರಾಜ್ಯದಲ್ಲಿ ಇಂದು 36 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...