
ಬೆಂಗಳೂರು: ಬೆಂಗಳೂರಿನಲ್ಲಿ ಸಾಫ್ಟ್ವೇರ್ ಇಂಜಿನಿಯರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕುರುಬರಹಳ್ಳಿ ಜಂಕ್ಷನ್ ಸಮೀಪ ಕಾರ್ ನಲ್ಲಿಯೇ ಟೆಕ್ಕಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಸಾಫ್ಟ್ವೇರ್ ಇಂಜಿನಿಯರ್ ವಿಜಯಕುಮಾರ್(51) ಆತ್ಮಹತ್ಯೆ ಮಾಡಿಕೊಂಡವರು ಎಂದು ಹೇಳಲಾಗಿದೆ. ಮೃತ ವಿಜಯಕುಮಾರ್ ಅವರು ಮಹಾಲಕ್ಷ್ಮಿ ಲೇಔಟ್ ನಿವಾಸಿಯಾಗಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.