alex Certify BREAKING: ಬೆಂಗಳೂರಿನಲ್ಲಿ ಆಲ್ ಖೈದಾ ಸಂಪರ್ಕದಲ್ಲಿದ್ದ ಶಂಕಿತ ಉಗ್ರ ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಬೆಂಗಳೂರಿನಲ್ಲಿ ಆಲ್ ಖೈದಾ ಸಂಪರ್ಕದಲ್ಲಿದ್ದ ಶಂಕಿತ ಉಗ್ರ ಅರೆಸ್ಟ್

ಬೆಂಗಳೂರು: ಬೆಂಗಳೂರು ನಗರದಲ್ಲಿ ಶಂಕಿತ ಉಗ್ರ ಆರೀಫ್ ನನ್ನು ಬಂಧಿಸಲಾಗಿದೆ. ಥಣಿಸಂದ್ರದ ಮಂಜುನಾಥ ನಗರದಲ್ಲಿ ಐ.ಎಸ್.ಡಿ. ಮತ್ತು ಕೇಂದ್ರ ತನಿಕಾ ಸಂಸ್ಥೆಗಳಿಂದ ಕಾರ್ಯಾಚರಣೆ ನಡೆಸಲಾಗಿದೆ.

ಶಂಕಿತ ಭಯೋತ್ಪಾದಕ ಆರೀಫ್ ಬಂಧಿಸಿ ತೀವ್ರ ವಿಚಾರಣೆಗೆ ಒಳಪಡಿಸಲಾಗಿದೆ. ಅಲ್ ಖೈದಾ ಉಗ್ರ ಸಂಘಟನೆ ಜೊತೆಗೆ ಆರಿಫ್ ಸಂಪರ್ಕದಲ್ಲಿರುವ ಮಾಹಿತಿ ಪಡೆದು ಕಾರ್ಯಾಚರಣೆ ನಡೆಸಲಾಗಿದೆ. ಆರೀಫ್ ನನ್ನು ಬಂಧಿಸಿದ ತನಿಖಾ ಸಂಸ್ಥೆಗಳು ವಿಚಾರಣೆಗೊಳಪಡಿಸಿದ್ದು, ಭಯೋತ್ಪಾದ ಚಟುವಟಿಕೆಗಳ ಬಗ್ಗೆ ಮಾಹಿತಿ ಕಲೆಹಾಕಿವೆ.

ಸಾಫ್ಟ್ವೇರ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಆರೀಫ್ ವರ್ಕ್ ಫ್ರಮ್ ಹೋಮ್ ಮೂಲಕ ಕೆಲಸ ಮಾಡುತ್ತಿದ್ದ. ಮುಂದಿನ ತಿಂಗಳು ಸಿರಿಯಾಗೆ ತೆರಳಲು ಪ್ಲಾನ್ ಮಾಡಿಕೊಂಡಿದ್ದ. ಎರಡು ವರ್ಷಗಳಿಂದ ಈತ ಅಲ್ ಖೈದಾ ಉಗ್ರ ಸಂಘಟನೆಯೊಂದಿಗೆ ಸಂಪರ್ಕದಲ್ಲಿದ್ದ ಎನ್ನುವ ಮಾಹಿತಿ ಗೊತ್ತಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...