ಬೆಂಗಳೂರು : ಪತ್ನಿಯನ್ನು ಬೆತ್ತಲೆಗೊಳಿಸಿ ಹತ್ಯೆ ಮಾಡಿದ್ದ ಪತಿಗೆ ‘ಜೀವಾವಧಿ’ ಶಿಕ್ಷೆ ನೀಡಿ ಕೋರ್ಟ್ ಆದೇಶ ಹೊರಡಿಸಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ 9ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ.
ಏನಿದು ಘಟನೆ
ಹೊಸಕೋಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಚುನ್ನು ಹನ್ಸದ್ ಎಂಬ ಪಾಪಿ ಗಂಡ ತನ್ನ ಪತ್ನಿಯ ಶೀಲವನ್ನು ಶಂಕಿಸಿ ವಿವಸ್ತ್ರಗೊಳಿಸಿ ಹತ್ಯೆ ಮಾಡಿದ್ದನು. ಚುನ್ನು ಅಪರಾಧಿ ಎಂಬುದು ಸಾಬೀತಾಗಿದ್ದರಿಂದ ಕೋರ್ಟ್ ಜೀವಾವಧಿ ಶಿಕ್ಷೆ ಹಾಗೂ ರೂ25 ಸಾವಿರ ದಂಡ ವಿಧಿಸಿದೆ.
ಸಹೋದ್ಯೋಗಿ ಯುವಕರ ಜೊತೆ ಪತ್ನಿ ಮಾತನಾಡುತ್ತಿದ್ದನ್ನು ಗಮನಿಸಿದ್ದ ಚುನ್ನು ಹನ್ಸದ್, ಪತ್ನಿಯೊಂದಿಗೆ ಜಗಳ ತೆಗೆಯುತ್ತಿದ್ದನು. ಒಂದು ದಿನ ತನ್ನ ಹೆಂಡತಿಯನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿ ಕುತ್ತಿಗೆ ಹಿಸುಕಿ ಹತ್ಯೆ ಮಾಡಿದ್ದನು. ಪ್ರಕರಣದ ವಿಚಾರಣೆಯನ್ನು ನ್ಯಾಯಾಧೀಶರಾದ ಎಸ್. ಶ್ರೀಧರ್ ಪಾಪಿ ಪತಿಗೆ ಜೀವಾವಧಿ ಶಿಕ್ಷೆ ಹಾಗೂ ರೂ25 ಸಾವಿರ ದಂಡ ವಿಧಿಸಿದ್ದಾರೆ.