alex Certify ಶಿವಾಜಿನಗರ ಮಸೀದಿಯಲ್ಲಿ ಉಗ್ರರು ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಕರೆ: ಪರಿಶೀಲನೆ ಬಳಿಕ ನಿಟ್ಟುಸಿರು ಬಿಟ್ಟ ಜನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಿವಾಜಿನಗರ ಮಸೀದಿಯಲ್ಲಿ ಉಗ್ರರು ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಕರೆ: ಪರಿಶೀಲನೆ ಬಳಿಕ ನಿಟ್ಟುಸಿರು ಬಿಟ್ಟ ಜನ

ಬೆಂಗಳೂರು: ಬೆಂಗಳೂರಿನ ಶಿವಾಜಿನಗರ ಮಸೀದಿಯಲ್ಲಿ ಬಾಂಬ್ ಇಡಲಾಗಿದೆ ಎಂದು ರಾತ್ರಿ 11 ಗಂಟೆಗೆ ಬೆದರಿಕೆ ಕರೆ ಬಂದಿದೆ.

ಪೊಲೀಸ್ ಸಹಾಯವಾಣಿ ಸಂಖ್ಯೆ 112ಕ್ಕೆ ಕರೆ ಮಾಡಿದ ಅಪರಿಚಿತ ವ್ಯಕ್ತಿ ಶಿವಾಜಿನಗರದ ಆಜಂ ಮಸೀದಿಗೆ ಬಾಂಬ್ ಇಟ್ಟಿದ್ದಾರೆ ಎಂದು ಹೇಳಿದ್ದಾನೆ. ಮಸೀದಿಯಲ್ಲಿ ಉಗ್ರರು ಬಾಂಬ್ ಇಟ್ಟಿರುವುದಾಗಿ ಅಪರಿಚಿತ ವ್ಯಕ್ತಿ ಕರೆ ಮಾಹಿತಿ ನೀಡಿದ್ದಾನೆ. ಮಾಹಿತಿ ತಿಳಿದು ಸ್ಥಳಕ್ಕೆ ಡೌಡಾಯಿಸಿದ ಶಿವಾಜಿನಗರ ಠಾಣೆ ಪೋಲೀಸರು ಪರಿಶೀಲನೆ ನಡೆಸಿದ್ದಾರೆ.

ಹಿರಿಯ ಅಧಿಕಾರಿಗಳ ಸಹಿತ ಭೇಟಿ ನೀಡಿ ಸ್ಥಳ ಪಡಿಶೀಲನೆ ನಡೆಸಿದ್ದಾರೆ. ಮಸೀದಿ ಪರಿಶೀಲನೆ ಬಳಿಕ ಹುಸಿಬಾಂಬ್ ಕರೆ ಇದಾಗಿದೆ ಎಂದು ಗೊತ್ತಾಗಿದೆ. ಆತಂಕಕ್ಕೆ ಒಳಗಾಗಿದ್ದ ಸಾರ್ವಜನಿಕರು ನಿಟ್ಟುಸಿರು ಬಿಟ್ಟಿದ್ದಾರೆ. ಹುಸಿ ಬಾಂಬ್ ಕರೆ ಮಾಡಿದ ಅಪರಿಚಿತ ವ್ಯಕ್ತಿಗಾಗಿ ಶಿವಾಜಿನಗರ ಠಾಣೆ ಪೊಲೀಸರು ಹುಡುಕಾಟ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...